ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಶ್ವಾಸನೆ ನೀಡುವುದನ್ನು ಮುಂದುವರಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಕ್ಷ ಅಧಿಕಾರಕ್ಕೆ ಬಂದರೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿ ತಿಂಗಳು ₹10 ಸಾವಿರ ಗೌರವಧನ ನೀಡುವುದಾಗಿ ಬುಧವಾರ ಪ್ರಕಟಿಸಿದ್ದಾರೆ.

ಈ ಕುರಿತು ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ’ಉತ್ತರ ಪ್ರದೇಶ ಸರ್ಕಾರ ಆಶಾ ಕಾರ್ಯಕರ್ತೆಯರ ಸೇವೆಯನ್ನು ಅವಮಾನಿಸುತ್ತಿದೆ’ ಎಂದು ದೂರಿದ್ದಾರೆ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಲು ಬಯಸಿದ್ದ ಆಶಾ ಕಾರ್ಯಕರ್ತರ ಮೇಲೆ ಶಹಜಹಾನ್‌ಪುರದಲ್ಲಿ ಪೊಲೀಸರು ಹಲ್ಲೆ ನಡೆಸಿರುವ ವಿಡಿಯೊ ತುಣಕನ್ನು ಟ್ಯಾಗ್ ಮಾಡಿದ್ದಾರೆ.

’ಉತ್ತರ ಪ್ರದೇಶ ಸರ್ಕಾರ ಆಶಾ ಕಾರ್ಯಕರ್ತೆಯರ ಮೇಲೆ ನಡೆಸುವ ಪ್ರತಿ ದಾಳಿಯೂ ಅವರ ಸೇವಾ ಕಾರ್ಯವನ್ನು ಅವಮಾನಿಸಿದಂತೆ. ಆಶಾ ಕಾರ್ಯಕರ್ತೆಯರು ಕೋವಿಡ್ ಸೇರಿದಂತೆ ಬೇರೆ ಬೇರೆ ಸಂದರ್ಭಗಳಲ್ಲಿ ಶ್ರದ್ಧೆಯಿಂದ ಸೇವೆ ಮಾಡಿದ್ದಾರೆ. ಗೌರವಧನವನ್ನು ಹೆಚ್ಚಿಸಿ ಎಂದು ಕೇಳುವುದು ಅವರ ಹಕ್ಕು. ಅವರ ಬೇಡಿಕೆ ಈಡೇರಿಸುವುದು ಸರ್ಕಾರದ ಕರ್ತವ್ಯ. ಕಾರ್ಯಕರ್ತೆಯರ ಮಾತುಗಳನ್ನು ಆಲಿಸಿ’ ಎಂದು ಪ್ರಿಯಾಂಕಾ ಒತ್ತಾಯಿಸಿದ್ದಾರೆ.

’ಆಶಾ ಸಹೋದರಿಯರು ಗೌರವಕ್ಕೆ ಅರ್ಹರು ಮತ್ತು ಈ ಹೋರಾಟದಲ್ಲಿ ನಾನು ಅವರೊಂದಿಗೆ ಇದ್ದೇನೆ’ ಎಂದು ಪ್ರಿಯಾಂಕಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.