ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತು ಮೋದಿ ಮೌನ ಪ್ರಶ್ನಿಸಿದ ಪ್ರಿಯಾಂಕಾ ಗಾಂಧಿ

Published 29 ಏಪ್ರಿಲ್ 2024, 8:10 IST
Last Updated 29 ಏಪ್ರಿಲ್ 2024, 8:10 IST
ಅಕ್ಷರ ಗಾತ್ರ

ನವದೆಹಲಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರು ಮೌನ ವಹಿಸಿರುವುದೇಕೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದಾರೆ.

ಈ ಕುರಿತಂತೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಿಯಾಂಕಾ, ‘ಪ್ರಧಾನಿ ಅವರು ಯಾರ ಭುಜದ ಮೇಲೆ ಕೈಯಿಟ್ಟು ಫೋಟೊ ತೆಗೆಸಿಕೊಂಡಿದ್ದರೋ, 10 ದಿನಗಳ ಹಿಂದೆ ಯಾರ ಪರ ಪ್ರಚಾರ ಮಾಡಿದ್ದರೋ, ಯಾರನ್ನು ವೇದಿಕೆ ಮೇಲೆ ಹೊಗಳಿದ್ದರೋ ಕರ್ನಾಟಕದ ಆ ನಾಯಕ ಇಂದು ತಲೆಮರೆಸಿಕೊಂಡಿದ್ದಾನೆ’ ಎಂದು ಪರೋಕ್ಷವಾಗಿ ಕುಟುಕಿದ್ದಾರೆ.

‘ಆತನ(ಪ್ರಜ್ವಲ್ ರೇವಣ್ಣ) ಘೋರ ಅಪರಾಧಗಳ ಬಗ್ಗೆ ಕೇಳಿದರೆ ಹೃದಯ ಕಂಪಿಸುತ್ತದೆ. ನೂರಾರು ಮಹಿಳೆಯರ ಬದುಕನ್ನು ಹಾಳು ಮಾಡಿದ್ದಾನೆ. ಮೋದಿ ಅವರೇ ಇನ್ನೂ ಸುಮ್ಮನಿರುತ್ತೀರಾ ನೀವು’ ಎಂದು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT