ನವದೆಹಲಿ: ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದ ವಿವರಗಳನ್ನು ಹಂಚಿಕೊಳ್ಳುವಂತೆ ರಾಹುಲ್ ಗಾಂಧಿ ಅವರನ್ನು ಕೇಳಿರುವ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಆಯೋಗ ಕೇವಲ ಬಿಜೆಪಿಗೆ ಮಾತ್ರ ಸೀಮಿತವೇ, ರಾಹುಲ್ ಅವರು ಕೇಳುತ್ತಿರುವ ಅಫಿಡವಿಟ್ ಕಾನೂನಿನ ಅಡಿಯಲ್ಲಿದೆ. ಮತದಾರರ ಪಟ್ಟಿಯಲ್ಲಿ ಬದಲು ಆಗಿರುವ ತಪ್ಪುಗಳು ಉದ್ದೇಶಪೂರ್ವಕವಾಗಿರಬಹುದು ಎಂಬ ಅನುಮಾನಗಳ ಕುರಿತು ತನಿಖೆ ನಡೆಯಬೇಕು ಎಂದು ಪ್ರಿಯಾಂಕಾ ಗಾಂಧಿ ಒತ್ತಾಯ ಮಾಡಿದ್ದಾರೆ.

ವಿಧಾನಸಭೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತಗಳು ಕಂಡುಬಂದಿವೆ ಅಂದರೆ ನಕಲಿ ಮತದಾರರು ಯಾರಿಗೆ ಮತ ಹಾಕುತ್ತಾರೋ ಅವರು ಗೆಲ್ಲುತ್ತಾರೆ. ಈ ಬಗ್ಗೆ ನಿಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸತ್ಯತೆ ಹೊರಬೇಕೆಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.