ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಉದ್ಯಮಿ ರಾಬರ್ಟ್ ವಾದ್ರಾ ಅವರ ಪುತ್ರ ರೆಹನ್ ವಾದ್ರಾ ಅವರು ತಮ್ಮ ಬಹುಕಾಲದ ಗೆಳತಿ ಅವಿವಾ ಬೇಗ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಅವಿವಾ ಬೇಗ್ ಜತೆಗಿನ ನಿಶ್ಚಿತಾರ್ಥದ ಫೋಟೊಗಳನ್ನು ರೆಹನ್ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘2025ರ ಡಿಸೆಂಬರ್ 9ರಂದು ನಾವು ನಿಶ್ಚಿತಾರ್ಥ ಮಾಡಿಕೊಂಡಿದ್ದೇವೆ’ ಎಂದು ಪ್ರಕಟಿಸಿರುವ ರೆಹನ್, ಉಂಗುರ ಮತ್ತು ಹೃದಯದ ಎಮೋಜಿಯನ್ನು ಹಂಚಿಕೊಂಡಿದ್ದಾರೆ.

ನಿಶ್ಚಿತಾರ್ಥದ ವೇಳೆ ರೆಹನ್, ಕ್ಲಾಸಿ ಸೂಟ್ ಧರಿಸಿ ಮಿಂಚಿದ್ದರೆ, ಅವಿವಾ ನೇರಳೆ ಬಣ್ಣದ ಸೀರೆಯನ್ನು ಧರಿಸಿ ಕಂಗೊಳಿಸಿದ್ದಾರೆ.

‘ನಿಮ್ಮಿಬ್ಬರನ್ನೂ ತುಂಬಾ ಪ್ರೀತಿಸುತ್ತೇನೆ. ನೀವು ಯಾವಾಗಲೂ ಒಬ್ಬರನ್ನೊಬ್ಬರು ಪ್ರೀತಿಸಿ ಮತ್ತು ಗೌರವಿಸಿ’ ಎಂದು ಪ್ರಿಯಾಂಕಾ ಗಾಂಧಿ ಶುಭ ಹಾರೈಸಿದ್ದಾರೆ.

‘ನನ್ನ ಮಗ ದೊಡ್ಡವನಾಗಿದ್ದು, ಜೀವನ ಸಂಗಾತಿಯನ್ನು ಹುಡುಕಿಕೊಂಡಿದ್ದಾನೆ. ಸಂತೋಷ, ಪ್ರೀತಿಯಿಂದ ತುಂಬಿದ ಜೀವನಕ್ಕಾಗಿ ಅವರಿಗೆ ನನ್ನ ಹೃತ್ಪೂರ್ವಕ ಆಶೀರ್ವಾದಗಳು. ರೆಹನ್ ಮತ್ತು ಅವಿವಾ ಒಟ್ಟಿಗೆ ಬೆಳೆಯುತ್ತಾ, ಅಭಿವೃದ್ಧಿ ಹೊಂದುತ್ತಾ ಸಾಗಲಿ’ ಎಂದು ರಾಬರ್ಟ್ ವಾದ್ರಾ ಸಂತಸ ವ್ಯಕ್ತಪಡಿಸಿದ್ದಾರೆ.

ಮೂಲಗಳ ಪ್ರಕಾರ, ರೆಹನ್ ಮತ್ತು ಅವಿವಾ ಕಳೆದ 7 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇತ್ತೀಚೆಗೆ ಈ ವಿಚಾರವನ್ನು ಪೋಷಕರಿಗೆ ತಿಳಿಸಿದ್ದು, ಅದಕ್ಕೆ ಅವರೂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಯಾರು ಅವಿವಾ ಬೇಗ್?

ಅವಿವಾ ಅವರು ಇಮ್ರಾನ್ ಬೇಗ್ ಹಾಗೂ ನಂದಿತಾ ಬೇಗ್ ದಂಪತಿಯ ಮಗಳು. ಮಾಧ್ಯಮ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ತಮ್ಮ ಆರಂಭಿಕ ಶಿಕ್ಷಣವನ್ನು ದೆಹಲಿಯಲ್ಲೇ ಪೂರ್ಣಗೊಳಿಸಿದ್ದಾರೆ. ಅವಿವಾ ಪ್ರಸ್ತುತ ವೃತ್ತಿಪರ ಛಾಯಾಗ್ರಾಹಕಿ ಮತ್ತು ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿದ್ದಾರೆ.
.ಬಹುಕಾಲದ ಗೆಳತಿಯನ್ನು ವರಿಸಲಿರುವ ರೆಹನ್ ವಾದ್ರಾ: ಪ್ರಿಯಾಂಕಾ ಭಾವಿ ಸೊಸೆ ಯಾರು?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.