ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೈಲ ಬೆಲೆ ಏರಿಕೆಗೆ ಜಾಗತಿಕ ವಿದ್ಯಮಾನ ಕಾರಣ: ಸಚಿವ ರವಿಶಂಕರ್‌ ಪ್ರಸಾದ್‌

Last Updated 10 ಸೆಪ್ಟೆಂಬರ್ 2018, 18:02 IST
ಅಕ್ಷರ ಗಾತ್ರ

ನವದೆಹಲಿ:ತೈಲ ಉತ್ಪಾದನಾ ರಾಷ್ಟ್ರಗಳು ಸರಬರಾಜು ಕಡಿತಗೊಳಿಸಿರುವುದು ಸಮಸ್ಯೆ ಉಲ್ಬಣಿಸಲು ಪ್ರಮುಖ ಕಾರಣ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಸೋಮವಾರ ಸುದ್ದಿಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದ್ದಾರೆ.

ವೆನೆಜುವೆಲಾದಲ್ಲಿ ಉದ್ಭವಿಸಿರುವ ರಾಜಕೀಯ ಅಸ್ಥಿರತೆ ಮತ್ತು ಇರಾನ್‌ ಮೇಲೆ ಅಮೆರಿಕದ ಆರ್ಥಿಕ ದಿಗ್ಬಂಧನದಂತಹ ಜಾಗತಿಕ ವಿದ್ಯಮಾನಗಳು ಬೆಲೆ ಹೆಚ್ಚಳಕ್ಕೆ ಕಾರಣ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಗ್ರಾಹಕರ ಮೇಲಿನ ಹೊರೆ ತಪ್ಪಿಸಲು ರಾಜ್ಯಗಳು ಪೆಟ್ರೋಲ್‌, ಡೀಸೆಲ್‌ ಮೇಲಿನ ತೆರಿಗೆ ಕೈಬಿಡಬೇಕು. ಇದು ರಾಜ್ಯಗಳ ವಿವೇಚನೆಗೆ ಬಿಟ್ಟ ವಿಚಾರ. ಕಳೆದ ವರ್ಷ ಕೇಂದ್ರ ಸರ್ಕಾರ ಅಬಕಾರಿ ಸುಂಕ ಕಡಿತಗೊಳಿಸಿತ್ತು ಎಂದು ಪ್ರಸಾದ್‌ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT