ಗಾಜಿಯಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ನ್ಯೂಯಾರ್ಕ್‌ಗೆ ಭೇಟಿ ನೀಡುವ ವೇಳೆ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಅಮೆರಿಕದಲ್ಲಿ ವಾಸಿಸುತ್ತಿರುವ ಭಾರತೀಯರಿಗೆ ಶುಕ್ರವಾರ ಮನವಿ ಮಾಡಿದ್ದಾರೆ.

ಪ್ರಧಾನಿ ಮೋದಿ ಭೇಟಿ ವೇಳೆ ಪ್ರತಿಭಟನೆ ನಡೆಸುವ ಮೂಲಕ ಕಳೆದ ಹತ್ತು ತಿಂಗಳಿನಿಂದ ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತ ಒಕ್ಕೂಟಗಳ ಬೆಂಬಲಕ್ಕೆ ನಿಲ್ಲುವಂತೆ ರಾಕೇಶ್ ಮನವಿ ಮಾಡಿದ್ದಾರೆ.

‘ಮೋದಿಯವರನ್ನು ಭೇಟಿಯಾಗುವ ವೇಳೆ, ರೈತರ ಕಾಳಜಿಯ ಬಗ್ಗೆ ಗಮನಹರಿಸಲು ಸಲಹೆ ನೀಡುವಂತೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಅವರು ಒತ್ತಾಯಿಸಿದ್ದಾರೆ.

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುವ ವೇಳೆ 750 ರೈತರು ಜೀವ ಕಳೆದುಕೊಂಡಿದ್ದಾರೆ. ಆದರೆ, ಕೇಂದ್ರ ಸರ್ಕಾರ ರೈತರ ಪ್ರತಿಭಟನೆಗೆ ಮನ್ನಣೆ ನೀಡಿ, ಕಾಯ್ದೆಗಳನ್ನು ರದ್ದುಗೊಳಿಸಲು ಮನಸ್ಸು ಮಾಡುತ್ತಿಲ್ಲ‘ ಎಂದು ಅಮೆರಿಕದ ನಿವಾಸಿಗಳ ಬೆಂಬಲವನ್ನು ಕೋರುವ ಸಂದರ್ಭದಲ್ಲಿ ರಾಕೇಶ್ ವಿವರಣೆ ನೀಡಿದರು.

ರಾಮ, ಕೃಷ್ಣ, ಶಿವ ಭಾರತದ ಮುಸ್ಲಿಮರ ಪೂರ್ವಜರು: ಉತ್ತರ ಪ್ರದೇಶ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.