ನವದೆಹಲಿ: ಮಾನೋಸಾಮಾಜಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ನಿರಾಶ್ರಿತರ ಪುನರ್ವರ್ಸತಿಯು ಸೂಕ್ಷ್ಮ ವಿಚಾರವಾಗಿದೆ. ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶಿಸಿದೆ.

'ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ' ಎಂದು ನ್ಯಾ. ವಿಕ್ರಮ್ ನಾಥ್ ಮತ್ತು ನ್ಯಾ. ಸಂದೀಪ್ ಮೆಹ್ತಾ ಅವರನ್ನೊಳಗೊಂಡ ಪೀಠಕ್ಕೆ ಮಾಹಿತಿ ನೀಡಿದೆ. ಹಾಗೆಯೇ, 'ಈ ವಿಚಾರವಾಗಿ ಕೈಗೊಂಡ ಕ್ರಮಗಳು, ಸಾಧನೆಯ ಮಾಹಿತಿಯನ್ನು ನೀಡಲು ಎಂಟು ವಾರಗಳ ಕಾಲಾವಕಾಶ ನೀಡುವಂತೆ' ಮನವಿ ಮಾಡಿದೆ.

ಇದಕ್ಕೆ ಪ್ರತಿಯಾಗಿ ಪೀಠವು, 'ಈ ವಿಚಾರವನ್ನು ತುಂಬಾ ಗಂಭೀರವಾಗಿ ಪರಿಗಣಿಸಬೇಕು. ಸಾಧ್ಯವಾದಷ್ಟು ಕಡಿಮೆ ಸಮಯ ತೆಗೆದುಕೊಳ್ಳಬೇಕು' ಎಂದು ಹೇಳಿದೆ.

ಮಾನೋಸಾಮಾಜಿಕ ಸಮಸ್ಯೆಗಳಿಂದ ಬಳಲುತ್ತಿರುವ ನಿರಾಶ್ರಿತರಿಗೆ ಸೂಕ್ತ ನೀತಿಗಳನ್ನು ರೂಪಿಸಿ, ಜಾರಿಗೊಳಿಸುವ ನಿಟ್ಟಿನಲ್ಲಿ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ವಕೀಲ ಗೌರವ್ ಕುಮಾರ್ ಬನ್ಸಲ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಈ ಅರ್ಜಿಯ ವಿಚಾರವಾಗಿ ನ್ಯಾಯಾಲಯವು ಏಪ್ರಿಲ್ನಲ್ಲೇ ಕೇಂದ್ರದ ಪ್ರತಿಕ್ರಿಯೆ ಕೇಳಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.