ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಸಿಆರ್ಪಿಎಫ್ ಶಿಬಿರದ ಮೇಲೆ ನಡೆದ ಗ್ರೆನೇಡ್ ದಾಳಿಯಲ್ಲಿ ಭಾಗಿಯಾಗಿದ್ದಾನೆ ಎನ್ನಲಾದ ಭಯೋತ್ಪಾದಕನೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಅವಂತಿಪೋರಾದ ತಹಸಿಲ್ನ ಹರಿ ಪರಿಗಮ್ ಎಂಬಲ್ಲಿ ಭದ್ರತಾ ಪಡೆಗಳು ಬುಧವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬಂಧಿಸಲಾದ ವ್ಯಕ್ತಿಯು ಸಾಕಿಬ್ ರೆಯಾಜ್ ಗನಿ. ಶಂಕಿತನು ಶೋಪಿಯಾನ್ ಜಿಲ್ಲೆಯ ಚಾಕಿ-ಚೋಲನ್ ನಿವಾಸಿಯಾಗಿದ್ದಾನೆ. ಈತನು ಕಳೆದ ಮೇ 20 ರಂದು ಲಾರಿಯಾರ್ನಲ್ಲಿ ಸಿಆರ್ಪಿಎಫ್ ಶಿಬಿರದ ಮೇಲೆ ನಡೆದ ಗ್ರೆನೇಡ್ ದಾಳಿಯ ಹಿಂದೆ ಈತನ ಕೈವಾಡವಿದೆ ಎಂದು ಅಧಿಕಾರಿಗಳು ಅಧಿಕೃತವಾಗಿ ಹೇಳಿದ್ದಾರೆ.

ಬಂಧಿತನಿಂದ ಒಂದು ಪಿಸ್ತೂಲ್, ಪಿಸ್ತೂಲ್ ಮ್ಯಾಗಜೀನ್ ಹಾಗೂ ಏಳು 9 ಎಂಎಂ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.