ಮುಂಬೈ: ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ಪಡೆ (ಎಟಿಎಸ್) ಪುಣೆಯ ಹಲವೆಡೆ ಶೋಧ ಕಾರ್ಯ ನಡೆಸಿತು.

ಐಎಸ್ ಮಾದರಿಯ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದನಾ ಕೃತ್ಯಕ್ಕೆ ಪ್ರೇರೆಪಿಸಿರುವ ಶಂಕಿತ ಆರೋಪಿಗಳ ಪತ್ತೆಗಾಗಿ ಈ ಶೋಧ ಕಾರ್ಯ ನಡೆಯಿತು.

‘ಪುಣೆಯಲ್ಲಿ ನಡೆದಿದ್ದ ಐಎಸ್ ಮಾದರಿಯ ದಾಳಿ ಪ್ರಕರಣಕ್ಕೆ ಸಂಬಂಧಿಸಿದ 19 ಆರೋಪಿಗಳಿಗೆ ಸೇರಿದ ಮನೆ ಮತ್ತು ಕಚೇರಿಗಳಲ್ಲಿ ಎಟಿಎಸ್ ಸಿಬ್ಬಂದಿ ಬುಧವಾರ ರಾತ್ರಿಯಿಂದ ಶೋಧ ನಡೆಸಿತು’ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

‘ಗುಪ್ತಚರ ಮಾಹಿತಿಯ ಆಧಾರದಲ್ಲಿ ಪುಣೆ ನಗರದ ಕೊಂಧ್ವಾ, ಖಡಕ್, ಖಡ್ಕಿ, ವಾನವಾಡಿ ಮತ್ತು ಭೋಸರಿ ಪ್ರದೇಶಗಳಲ್ಲಿ ತನಿಖೆ ನಡೆಸಲಾಗಿದೆ. ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಕೊಂಧ್ವಾದ ಹಲವೆಡೆ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.