ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪುಣೆ:ಎನ್‌ಐವಿಗೆ ಸಿಐಎಸ್‌ಎಫ್‌ ಭದ್ರತೆ

Published 11 ಜನವರಿ 2024, 14:38 IST
Last Updated 11 ಜನವರಿ 2024, 14:38 IST
ಅಕ್ಷರ ಗಾತ್ರ

ಪಿಟಿಐ

ನವದೆಹಲಿ: ಭಯೋತ್ಪಾದಕ ದಾಳಿ ಅಥವಾ ವಿಧ್ವಂಸಕ ಕೃತ್ಯದಿಂದ ರಕ್ಷಣೆ ನೀಡುವ ಉದ್ದೇಶದಿಂದ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ(ಎನ್‌ಐವಿ)ಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್‌) ಭದ್ರತೆಯನ್ನು ಪಡೆಯಲಾಗಿದೆ’ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸಂಸ್ಥೆಯ ಮತ್ತು ಭದ್ರತಾಪಡೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯ ಸಮ್ಮುಖದಲ್ಲಿ ಸಿಐಎಸ್‌ಎಫ್‌ ಯೋಧರು, ಡಾ.ಬಿ.ಆರ್‌ ಅಂಬೇಡ್ಕರ್‌ ರಸ್ತೆಯಲ್ಲಿರುವ ಎನ್‌ಐವಿ ಸಂಸ್ಥೆಯ ಭದ್ರತೆಗೆ ನಿಯೋಜನೆಗೊಂಡಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ದೇಶದ ಜೈವಿಕ ತಂತ್ರಜ್ಞಾನ ಸಂಸ್ಥೆಗಳಿಗೆ ದೇಶ ವಿರೋಧಿಗಳಿಂದ ಬೆದರಿಕೆ ಇರುವುದರಿಂದ ಭದ್ರತೆ ನೀಡಲಾಗುತ್ತಿದೆ’ ಎಂದು ಸಿಐಎಸ್‌ಎಫ್‌ ವಕ್ತಾರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT