ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೋಶೆ ಕಾರು ಅಪಘಾತ: ಬಾಲಕನ ಗೃಹಬಂಧನ 25ರವರೆಗೆ ವಿಸ್ತರಣೆ

Published 12 ಜೂನ್ 2024, 14:33 IST
Last Updated 12 ಜೂನ್ 2024, 14:33 IST
ಅಕ್ಷರ ಗಾತ್ರ

ಪುಣೆ: ಪೋಶೆ ಕಾರು ಅಪಘಾತ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾದ 17 ವರ್ಷದ ಬಾಲಕನ ಗೃಹಬಂಧನವನ್ನು ಇಲ್ಲಿನ ಬಾಲ ನ್ಯಾಯ ಮಂಡಳಿಯು ಜೂನ್ 25ರವರೆಗೆ ವಿಸ್ತರಿಸಿದೆ. 

ಪುಣೆಯ ಕಲ್ಯಾಣಿ ನಗರದಲ್ಲಿ ಮೇ 19ರಂದು ಬೆಳಿಗ್ಗೆ ಪೋಶೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಟೆಕಿಗಳು ಸ್ಥಳದಲ್ಲೇ ಮೃತಪಟ್ಟಿದ್ದರು. ಈ ವೇಳೆ ಕಾರನ್ನು ಬಾಲಕ ಕುಡಿದ ಮತ್ತಿನಲ್ಲಿ ಚಲಾಯಿಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ಬಾಲಕನನ್ನು ಜೂನ್ 12ರವರೆಗೆ ಗೃಹಬಂಧನದಲ್ಲಿರಿಸಲಾಗಿತ್ತು. ಈ ಅವಧಿಯನ್ನು 25ರವರೆಗೆ ವಿಸ್ತರಿಸಲಾಗಿದೆ. 

ಈ ಪ್ರಕರಣದಲ್ಲಿ ರಕ್ತದ ಮಾದರಿಗಳನ್ನು ಬದಲಾಯಿಸಿದ ಆರೋಪದಲ್ಲಿ ಬಾಲಕನ ಪೋಷಕರನ್ನು ಪೊಲೀಸರು ವಶದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT