ಪುಣೆ: ‘ನೀಟ್–ಯುಜಿ’ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಆರೋಪಿ ಶಿವರಾಜ್ ರಘುನಾಥ್ ಮೋಟೆಗಾಂವ್ಕರ್ ಅವರ ಒಡೆತನದ ರೇಣುಕೈ ಕರಿಯರ್ ಸೆಂಟರ್ ಇರುವ ಆವರಣಕ್ಕೆ ಮುಂಬೈ ಮಹಾನಗರ ಪಾಲಿಕೆಯು ಬುಧವಾರ ಬೀಗ ಹಾಕಿದೆ.

ಕಟ್ಟಡಕ್ಕೆ ಸ್ವಾಧೀನ ದೃಢೀಕರಣ ಪತ್ರ ನೀಡುವ ಮುನ್ನವೇ ಕೋಚಿಂಗ್ ಸೆಂಟರ್ ನಡೆಸುತ್ತಿದ್ದ ಆರೋಪದಲ್ಲಿ ಈ ಕ್ರಮವನ್ನು ತೆಗದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನೀಟ್ ಪರೀಕ್ಷೆ ನಡೆಯುವ 10 ದಿನ ಮುಂಚೆಯೇ ರಸಾಯನ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಶಿವರಾಜ್ ಅವರಿಗೆ ತಲುಪಿತ್ತು ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಭಾನುವಾರ ಶಿವರಾಜ್ ಅವರನ್ನು ಬಂಧಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-51-458042156

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.