ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಣೆ | ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ‘ಪೋಷೆ’ ಕಾರು ಅಪಘಾತ ಪ್ರಕರಣ: ತಂದೆ ಬಂಧನ

Published 21 ಮೇ 2024, 4:26 IST
Last Updated 21 ಮೇ 2024, 4:26 IST
ಅಕ್ಷರ ಗಾತ್ರ

ಪುಣೆ (ಮಹಾರಾಷ್ಟ್ರ): ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ಸ್ಪೋರ್ಟ್ಸ್‌ ಕಾರು ‘ಪೋಷೆ’, ಬೈಕ್‌ಗೆ ಡಿಕ್ಕಿ ಹೊಡೆದ ಪ್ರಕರಣ ಸಂಬಂಧ ಬಾಲಕನ ತಂದೆಯನ್ನು ಸಂಭಾಜಿನಗರದಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಕಲ್ಯಾಣಿ ನಗರದಲ್ಲಿ ಭಾನುವಾರ 17 ವರ್ಷದ ಬಾಲಕ ಚಲಾಯಿಸುತ್ತಿದ್ದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಮೃತರನ್ನು ಅನಿಸ್ ಅವಧಿಯಾ ಮತ್ತು ಅಶ್ವಿನಿ ಕೋಸ್ಟಾ ಎಂದು ಗುರುತಿಸಲಾಗಿದೆ. ಘಟನೆ ವೇಳೆ ಬಾಲಕ ಪಾನಮತ್ತನಾಗಿದ್ದ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಬಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆತನನ್ನು ಬಂಧಿಸಿ ಬಾಲಾಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಜಾಮೀನು ನೀಡಿದೆ. ಆದರೆ, ಬಾಲಕನನ್ನು ವಯಸ್ಕ ಎಂದು ಪರಿಗಣಿಸಲು ಉನ್ನತ ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT