ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಶೆ ಅಪಘಾತ: ಮೃತರ ಸ್ಮರಣಾರ್ಥ ಮೇಣದ ಬೆಳಕಿನ ನಡಿಗೆ

Published 26 ಮೇ 2024, 5:17 IST
Last Updated 26 ಮೇ 2024, 5:17 IST
ಅಕ್ಷರ ಗಾತ್ರ

ಪುಣೆ: ಪೋಶೆ ಕಾರು ಅಪಘಾತದಲ್ಲಿ ಮೃತಪಟ್ಟ ಇಬ್ಬರು ಟೆಕ್ಕಿಗಳಿಗೆ ಶ್ರದ್ಧಾಂಜಲಿ ಅರ್ಪಿಸಲು ಶನಿವಾರ ರಾತ್ರಿ ಸ್ಥಳೀಯರು ಮೇಣದ ಬೆಳಕಿನ ನಡಿಗೆ ಏರ್ಪಡಿಸಿದ್ದರು.

ಏಳು ದಿನಗಳ ಹಿಂದೆ ಪುಣೆಯ ಕಲ್ಯಾಣಿ ಪ್ರದೇಶದಲ್ಲಿ 17 ವರ್ಷದ ಬಾಲಕ ಕುಡಿತದ ಮತ್ತಿನಲ್ಲಿ ಚಲಾಯಿಸುತ್ತಿದ್ದಐಷಾರಾಮಿ ಪೋಶೆ ಕಾರು ಡಿಕ್ಕಿ ಹೊಡೆದು ಬೈಕ್‌ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದರು.

ಮಧ್ಯಪ್ರದೇಶದ ಅನಿಶ್ ಅವಧಿಯಾ ಹಾಗೂ ಅಶ್ವಿನಿ ಕೋಸ್ಟಾ ಘಟನೆಯಲ್ಲಿ ಸಾವಿಗೀಡಾಗಿದ್ದರು. ಈ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು.

ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಸ್ಥಳೀಯ ನಿವಾಸಿಗಳು ಮೇಣದ ಬೆಳಕಿನ ಮೌನ ನಡಿಗೆ ಏರ್ಪಡಿಸಿದ್ದರು. ವಸತಿ ಪ್ರದೇಶಗಳಲ್ಲಿ ರಾತ್ರಿ ವೇಳೆಯಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಬೇಕು ಎಂದೂ ಅವರ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT