ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌; ವಿವಸ್ತ್ರಗೊಳಿಸಿ ಮಹಿಳೆಯ ಮೆರವಣಿಗೆ

Published 6 ಏಪ್ರಿಲ್ 2024, 16:03 IST
Last Updated 6 ಏಪ್ರಿಲ್ 2024, 16:03 IST
ಅಕ್ಷರ ಗಾತ್ರ

ತರನ್ ತಾರನ್‌: 55 ವರ್ಷ ವಯಸ್ಸಿನ ಮಹಿಳೆಯೊಬ್ಬರನ್ನು ಥಳಿಸಿ, ಅರೆವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಪಂಜಾಬ್‌ನ ವಲ್ಟೋಹ ಗ್ರಾಮದಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಮಾರ್ಚ್‌ 31ರಂದು ತಾವು ಮನೆಯಲ್ಲಿ ಒಬ್ಬರೇ ಇದ್ದಾಗ ತಮ್ಮ ಮಗನ ಹೆಂಡತಿ ಮನೆಯವರೇ ಈ ಕೃತ್ಯ ನಡೆಸಿದ್ದಾರೆ ಎಂದು ಮಹಿಳೆಯು ದೂರಿನಲ್ಲಿ ಹೇಳಿದ್ದಾರೆ. ಮಹಿಳೆಯನ್ನು ಮೆರವಣಿಗೆ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಶುಕ್ರವಾರ ಅಪ್‌ಲೋಡ್‌ ಆಗಿದೆ.

ಐವರು ಆರೋಪಿಗಳ ವಿರುದ್ಧ ‍ಏಪ್ರಿಲ್‌ 3ರಂದು ಪ್ರಕರಣ ದಾಖಲಿಸಲಾಗಿತ್ತು. ಅವರಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಐದನೇ ಆರೋಪಿಯನ್ನು ಸೆರೆಹಿಡಿಯುವ ಪ್ರಯತ್ನ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಂತ್ರಸ್ತ ಮಹಿಳೆಯ ಮಗನು ಯುವತಿಯೊಬ್ಬಳ ಜೊತೆ ಪರಾರಿಯಾಗಿ, ಆಕೆಯ ಕುಟುಂಬ ಸದಸ್ಯರ ವಿರೋಧದ ನಡುವೆಯೇ ಮದುವೆಯಾಗಿದ್ದನು. ಇದಾದ ಕೆಲ ದಿನಗಳಲ್ಲೇ ಯುವತಿಯ ಕುಟುಂಬ ಸದಸ್ಯರು ಮಹಿಳೆ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಯುವತಿಯ ತಾಯಿ, ಇಬ್ಬರು ಸಹೋದರರು ಮತ್ತು ಕುಟುಂಬದ ಸ್ನೇಹಿತರೊಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಅವರು ವಿಡಿಯೊ ಚಿತ್ರೀಕರಿಸಿರುವ ಮೊಬೈಲ್‌ ಫೋನ್‌ಅನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT