ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ–ಎಸ್ಎಡಿ ಜೊತೆ ಮೈತ್ರಿ: ಅಮರಿಂದರ್ ಸಿಂಗ್

Last Updated 6 ಡಿಸೆಂಬರ್ 2021, 12:52 IST
ಅಕ್ಷರ ಗಾತ್ರ

ಚಂಡೀಗಡ: ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು 'ಪಂಜಾಬ್ ಲೋಕ್ ಕಾಂಗ್ರೆಸ್' ಪಕ್ಷದ ಮುಖ್ಯಸ್ಥ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ಅಮರಿಂದರ್‌ ಅವರು, ಪಂಜಾಬ್ ಕಾಂಗ್ರೆಸ್‌ನಲ್ಲಿ ತಲೆದೋರಿದ ಬಿಕ್ಕಟ್ಟಿನಿಂದಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸೆಪ್ಟೆಂಬರ್‌ನಲ್ಲಿ ರಾಜೀನಾಮೆ ನೀಡಿದ್ದರು. ಬಳಿಕ ಆ ಪಕ್ಷದಿಂದ ಹೊರಬಂದು ನವೆಂಬರ್‌ನಲ್ಲಿ 'ಪಂಜಾಬ್ ಲೋಕ ಕಾಂಗ್ರೆಸ್' ಪಕ್ಷ ಸ್ಥಾಪಿಸಿದ್ದಾರೆ. ಅದರಪ್ರಧಾನ ಕಚೇರಿಯನ್ನುಚಂಡೀಗಡದಲ್ಲಿ ಸೋಮವಾರ (ಡಿ.6ರಂದು) ಉದ್ಘಾಟಿಸಿದರು.

ನಂತರಮಾಧ್ಯಮದವರೊಂದಿಗೆ ಮಾತನಾಡಿರುವ ಸಿಂಗ್, 'ತಾತ್ವಿಕ ನಿರ್ಧಾರ ಕೈಗೊಂಡಿದ್ದೇವೆ ಅಷ್ಟೇ. ಸೀಟು ಹೊಂದಾಣಿಕೆ ಬಗ್ಗೆ ಇನ್ನಷ್ಟೇ ಮಾತುಕತೆ ನಡೆಯಬೇಕಿದೆ. ಸುಖದೇವ್‌ ಸಿಂಗ್‌ ಧಿಂಡ್ಸಾ ಸಾಹೇಬ್ ಅವರ (ಎಸ್‌ಎಡಿ) ಪಕ್ಷದೊಂದಿಗೂ ಸೀಟು ಹಂಚಿಕೆ ಮಾಡಿಕೊಳ್ಳಲಿದ್ದೇವೆ. ನಾವು ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಮತ್ತು ಅಂತಹವರಿಗೇ ಬೆಂಬಲ ನೀಡಬೇಕು ಎಂದು ಎರಡೂ ಪಕ್ಷಗಳಿಗೆ ಹೇಳುತ್ತೇನೆ' ಎಂದು ತಿಳಿಸಿದರು.

ಮುಂದಿನ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, 'ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವುದು ನಮ್ಮ ಗುರಿಯಾಗಿದೆ. ಗೆದ್ದೇ ಗೆಲ್ಲುತ್ತೇವೆ' ಎಂದಿದ್ದಾರೆ.

ಹಾಗೆಯೇ, ಸದಸ್ಯತ್ವ ಅಭಿಯಾನ ಈಗಾಗಲೇ ಆರಂಭವಾಗಿದೆ. ಜನರು ಪಕ್ಷಕ್ಕೆ ಸೇರಿಕೊಳ್ಳಬಹುದಾಗಿದೆ ಎಂದು ಕರೆ ನೀಡಿದರು.

117 ಸದಸ್ಯ ಬಲದ ಪಂಜಾಬ್‌ ವಿಧಾನಸಭೆಗೆ 2022ರಲ್ಲಿ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT