ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.27ರಂದು ಪಂಜಾಬ್ ವಿಧಾನಸಭೆ ಅಧಿವೇಶನ: ಸಿಎಂ ಭಗವಂತ ಮಾನ್

Last Updated 22 ಸೆಪ್ಟೆಂಬರ್ 2022, 9:56 IST
ಅಕ್ಷರ ಗಾತ್ರ

ಚಂಡೀಗಢ: ಸೆಪ್ಟೆಂಬರ್ 27ರಂದು ಪಂಜಾಬ್ ವಿಧಾನಸಭೆ ಅಧಿವೇಶನವನ್ನು ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಭಗವಂತ ಮಾನ್ ಗುರುವಾರ ಹೇಳಿದ್ದಾರೆ.

ವಿಶ್ವಾಸಮತ ಸಾಬೀತುಪಡಿಸಲು ಪಂಜಾಬ್‌ನ ಆಡಳಿತರೂಢ ಎಎಪಿ ಸರ್ಕಾರವು ಕರೆದಿದ್ದ ವಿಶೇಷ ಅಧಿವೇಶನಕ್ಕೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಬುಧವಾರ ಅನುಮತಿ ನಿರಾಕರಿಸಿದ್ದರು.

ಇದರ ಬೆನ್ನಲ್ಲೇ ಪಂಜಾಬ್ ಸಿಎಂ ಭಗವಂತ ಮಾನ್, ವಿವಿಧ ವಿಷಯಗಳ ಕುರಿತು ಚರ್ಚಿಸಲು ವಿಧಾನಸಭಾ ಅಧಿವೇಶನ ಕರೆಯಲು ನಿರ್ಧರಿಸಿದ್ದಾರೆ.

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸೆಪ್ಟೆಂಬರ್ 27ರಂದು ವಿಧಾನಸಭಾ ಅಧಿವೇಶನ ಕರೆಯಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಭಗವಂತ ಮಾನ್ ಹೇಳಿದ್ದಾರೆ.

ಅಧಿವೇಶನದಲ್ಲಿ ವಿದ್ಯುತ್ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಗುವುದು ಎಂದು ಹೇಳಿದರು.

ಅದೇ ಹೊತ್ತಿಗೆ ವಿಶೇಷ ಅಧಿವೇಶನ ಕರೆಯುವ ಆದೇಶವನ್ನು ರಾಜ್ಯಪಾಲರು ರದ್ದುಗೊಳಿಸಿರುವ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗುವುದಾಗಿ ಅವರು ಸ್ಪಷ್ಟಪಡಿಸಿದರು.

ಈ ಮೊದಲು ಆಪರೇಷನ್ ಕಮಲದ ಮೂಲಕ ಬಿಜೆಪಿಯು ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದ ಭಗವಂತ ಮಾನ್, ಎಎಪಿ ಶಾಸಕರಿಗೆ ₹25ಕೋಟಿ ಆಮಿಷವೊಡ್ಡಲಾಗಿದೆ ಎಂದು ಹೇಳಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT