ಚಂಡೀಗಢ: ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಶುಕ್ರವಾರ ಸಂಜೆ ಮೊಹಾಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

51 ವರ್ಷದ ಮಾನ್ ಅವರು ಕಳೆದ ಎರಡು ದಿನಗಳಿಂದ ವೈರಲ್ ಜ್ವರ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು. ಸಂಜೆಯಾದರೂ ಅವರ ಸ್ಥಿತಿ ಸುಧಾರಿಸದ ಕಾರಣ ಅವರನ್ನು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ವೈದ್ಯರ ತಂಡ ಅವರನ್ನು ಪರೀಕ್ಷಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಅವರ ಅನಾರೋಗ್ಯದ ಸುದ್ದಿ ಬಂದ ನಂತರ, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಗುರುವಾರ ಮಾನ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

ಪ್ರವಾಹ ಪರಿಸ್ಥಿತಿಯನ್ನು ನಿರ್ಣಯಿಸಲು ಕೇಜ್ರಿವಾಲ್ ಬುಧವಾರ ಸಂಜೆ ಪಂಜಾಬ್ಗೆ ಆಗಮಿಸಿದ್ದರು. ಮುಖ್ಯಮಂತ್ರಿಯೊಂದಿಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು. ಆದರೆ, ಮಾನ್ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಕೇಜ್ರಿವಾಲ್ ಒಬ್ಬರೇ ಭೇಟಿ ಕೈಗೊಂಡಿದ್ದರು.

ಕಳೆದ ವರ್ಷವೂ ಇದೇ ಸಮಯದಲ್ಲಿ ಸೋಂಕಿನ ಸಮಸ್ಯೆಗೆ ತುತ್ತಾಗಿದ್ದ ಮಾನ್, ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಕೆಲ ದಿನಗಳು ಚಿಕಿತ್ಸೆ ಪಡೆದಿದ್ದರು.

ಪಂಜಾಬ್ನಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಈವರೆಗೆ 43 ಮಂದಿ ಮೃತಪಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.