ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್ ಕುಟುಂಬದವರನ್ನು ಭೇಟಿಯಾಗಲು ದೆಹಲಿಗೆ ಬಂದ ಪಂಜಾಬ್ ಸಿಎಂ ಭಗವಂತ ಮಾನ್

Published 22 ಮಾರ್ಚ್ 2024, 10:43 IST
Last Updated 22 ಮಾರ್ಚ್ 2024, 10:43 IST
ಅಕ್ಷರ ಗಾತ್ರ

ನವದೆಹಲಿ: ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಕುಟುಂಬದವರನ್ನು ಭೇಟಿ ಮಾಡಲು ಪಂಜಾಬ್‌ ಸಿಎಂ ಭಗವಂತ ಮಾನ್‌ ಅವರು ದೆಹಲಿಗೆ ಶುಕ್ರವಾರ ಭೇಟಿ ನೀಡಿದ್ದಾರೆ.

'ಮಾನ್‌ ಅವರು ಕೇಜ್ರಿವಾಲ್ ನಿವಾಸ ತಲುಪಿದ್ದು, ಕುಟುಂಬದವರೊಂದಿಗೆ ಮಾತುಕತೆ ನಡೆಸಲಿದ್ದಾರೆ' ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಪದಾಧಿಕಾರಿಗಳು ತಿಳಿಸಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್‌ ಅವರ ನಿವಾಸಕ್ಕೆ ದೆಹಲಿ ಸಚಿವ ಗೋಪಾಲ್‌ ರಾಯ್ ಅವರು ಇಂದು ಬೆಳಗ್ಗೆ ಭೇಟಿ ನೀಡಿದ್ದರು. ಬಂಧಿತ ದೆಹಲಿ ಸಿಎಂ ಕುಟುಂಬದವರನ್ನು ಭೇಟಿ ಮಾಡಲು ಆರಂಭದಲ್ಲಿ ಅನುಮತಿ ಸಿಕ್ಕಿರಲಿಲ್ಲ ಎಂದು ಅವರು ಆರೋಪಿಸಿದ್ದರು.

ದೆಹಲಿ ಸರ್ಕಾರ ಸದ್ಯ ಹಿಂಪಡೆದಿರುವ 'ಅಬಕಾರಿ ನೀತಿ' ಜಾರಿ ವೇಳೆ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್‌ ಅವರನ್ನು ಇ.ಡಿ ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ. ಇದರ ಬೆನ್ನಲ್ಲೇ, ದೆಹಲಿ ಸಚಿವರು, ಎಎಪಿ ನಾಯಕರು ಮತ್ತು ಕಾರ್ಯಕರ್ತರು ಆದಾಯ ತೆರಿಗೆ ಇಲಾಖೆ ಕಚೇರಿ ಎದುರು ಹಾಗೂ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT