ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಣ್ಣು ಮಗುವಿಗೆ ಜನ್ಮ ನೀಡಿದ ಪಂಜಾಬ್ ಸಿಎಂ ಭಗವಂತ ಮಾನ್ ಪತ್ನಿ

Published 28 ಮಾರ್ಚ್ 2024, 9:26 IST
Last Updated 28 ಮಾರ್ಚ್ 2024, 9:26 IST
ಅಕ್ಷರ ಗಾತ್ರ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಪತ್ನಿ ಗುರ್ಪ್ರೀತ್ ಕೌರ್ ಗುರುವಾರ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ಈ ಬಗ್ಗೆ ಸಿಎಂ ಮಾನ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

'ಸರ್ವಶಕ್ತನಾದ ಭಗವಂತ ನಮಗೆ ಮಗಳನ್ನು ಉಡುಗೊರೆಯಾಗಿ ಆಶೀರ್ವದಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ' ಎಂದು ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಜತೆಗೆ ಮಗುವಿನ ಫೋಟೊವನ್ನು ಸಹ ಹಂಚಿಕೊಂಡಿದ್ದಾರೆ.

2015 ರಲ್ಲಿ ಮೊದಲ ಪತ್ನಿಯಿಂದ ವಿಚ್ಛೇದನ ಪಡೆದ ಸಿಎಂ ಮಾನ್‌ ಬಳಿಕ 2022ರಲ್ಲಿ ಕೌರ್ ಅವರನ್ನು ವಿವಾಹವಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT