ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದೆ ಎಂದು ಅವರು ದಾಖಲಾಗಿದ್ದ ಖಾಸಗಿ ಆಸ್ಪತ್ರೆಯು ಮಾಹಿತಿ ನೀಡಿದೆ.

51 ವರ್ಷದ ಭಗವಂತ್ ಸಿಂಗ್ ಅವರು ಬಳಲಿಕೆ ಹಾಗೂ ಕಡಿಮೆ ಹೃದಯ ಬಡಿತದ ಕಾರಣ ಮೊಹಲಿಯ ಖಾಸಗಿ ಆಸ್ಪತ್ರೆಗೆ ಶುಕ್ರವಾರ ಸಂಜೆ ದಾಖಲಾಗಿದ್ದರು.

ಅನಾರೋಗ್ಯದ ಕಾರಣ, ಶುಕ್ರವಾರ ಮುಖ್ಯಮಂತ್ರಿ ಮಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿತ್ತು. ಪಂಜಾಬ್ನ ನೆರೆಪೀಡಿತ ಪ್ರದೇಶಗಳಿಗೆ ಗುರುವಾರ ಎಎಪಿ ರಾಷ್ಟ್ರೀಯ ವಕ್ತಾರ ಅರವಿಂದ್ ಕ್ರೇಜಿವಾಲ್ ಭೇಟಿ ನೀಡಿದ್ದಾಗ ಕೂಡ ಮಾನ್ ಅವರ ಜೊತೆಗಿರಲಿಲ್ಲ.

ಮುಖ್ಯಮಂತ್ರಿ ಭಗವಂತ್ ಸಿಂಗ್ ಅವರ ಅಧಿಕೃತ ನಿವಾಸದಲ್ಲಿ ಅವರನ್ನು ಕ್ರೇಜಿವಾಲ್ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು.

ಕಳೆದ ವರ್ಷ ಇದೇ ಖಾಸಗಿ ಆಸ್ಪತ್ರೆಯಲ್ಲಿ ಮಾನ್ ಅವರು ವೈರಾಣು ಸೋಂಕಿಗೆ ಚಿಕಿತ್ಸೆ ಪಡೆದಿದ್ದರು.

ಪಂಜಾಬ್ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮಳೆಯ ಪ್ರಮಾಣ ಕಡಿಮೆಯಾಗಿದ್ದು, ರಕ್ಷಣಾ ಕಾರ್ಯಾಚರಣೆಗಳು ಜರುಗುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.