ಚಂಡೀಗಢ: ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಗಳನ್ನು ವಿರೋಧಿಸುವ ನಿರ್ಣಯವನ್ನುಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ಇದು ಕೃಷಿ ಮತ್ತು ರಾಜ್ಯದ ರೈತರ ರಕ್ಷಣೆಗಾಗಿ ಕೈಗೊಂಡಿರುವ ಕ್ರಮ ಎಂದು ಅವರು ಹೇಳಿದರು.

ಈ ವೇಳೆ ಕೇಂದ್ರದ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ತಿರಸ್ಕರಿಸುವ ನಿರ್ಣಯವನ್ನೂ ಮಂಡಿಸಲಾಗಿದೆ.

ಎಲ್ಲಾ ಪಕ್ಷಗಳು ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಬದಿಗಿಟ್ಟು ಪಂಜಾಬ್ ಅನ್ನು ರಕ್ಷಿಸಬೇಕು ಎಂದು ಅಮರಿಂದರ್ ಸಿಂಗ್ ಮನವಿ ಮಾಡಿದರು.

ವಿವಿಧ ತಜ್ಞರೊಂದಿಗೆ ಚರ್ಚೆ ನಡೆಸಿದ ಬಳಿಕ ಸೋಮವಾರ ರಾತ್ರಿ 9.30 ಕ್ಕೆ ‘ಕೃಷಿ ವಿರೋಧಿ ಕಾನೂನು’ ವಿರುದ್ಧದ ನಿರ್ಣಯ ಮಂಡನೆಗೆ ಸಹಿ ಹಾಕಿದ್ದೇನೆ. ಭಾರತ ಸರ್ಕಾರ ಏನು ಮಾಡಲು ಇಚ್ಛಿಸುತ್ತಿದೆ ಎಂಬುದೇ ತಿಳಿಯುತ್ತಿಲ್ಲ ಎಂದು ಅವರು ಹೇಳಿದರು.

ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ನೆರವು) ಮಸೂದೆ, ಬೆಲೆ ಖಾತರಿ ಹಾಗೂ ಬೇಸಾಯ ಸೇವೆಗಳಿಗೆ ರೈತರ ಒಪ್ಪಿಗೆ (ಸಶಕ್ತೀಕರಣ ಹಾಗೂ ರಕ್ಷಣೆ), ಅಗತ್ಯ ವಸ್ತುಗಳ (ತಿದ್ದುಪಡಿ) ಮಸೂದೆಗಳಿಗೆ ಸಂತ್ತಿನಲ್ಲಿ ಅಂಗೀಕಾರಿಸಲಾಗಿದ್ದು, ರಾಷ್ಟ್ರಪತಿ ಅವರು ಕೂಡ ಅಂಕಿತ ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.