ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಫಿರೋಝ್‌ಪುರ ಕಾರಾಗೃಹದ ಹೊರಗೆ ಗುಂಡಿನ ದಾಳಿ; ಪಂಜಾಬ್ ಕಾಂಗ್ರೆಸ್ ನಾಯಕನಿಗೆ ಗಾಯ

Published 22 ಜೂನ್ 2024, 8:09 IST
Last Updated 22 ಜೂನ್ 2024, 8:09 IST
ಅಕ್ಷರ ಗಾತ್ರ

ಲೂಧಿಯಾನ: ಫಿರೋಝ್‌ಪುರ ಕೇಂದ್ರ ಕಾರಾಗೃಹದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಪಂಜಾಬ್ ಕಾಂಗ್ರೆಸ್‌ ನಾಯಕ ಲಲಿತ್ ಕುಮಾರ್‌ ಪಸ್ಸಿ ಗಾಯಗೊಂಡಿದ್ದಾರೆ. ಈ ಬಗ್ಗೆ ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಲಲಿತ್‌ ಅವರನ್ನು ಲೂಧಿಯಾನದ ದಯಾನಂದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

'ಫಿರೋಝ್‌ಪುದಲ್ಲಿ ಗುಂಡಿನ ದಾಳಿ ನಡೆದಿದೆ. ಲಲಿತ್ ಕುಮಾರ್‌ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಎಫ್ಐಆರ್‌ ದಾಖಲಿಸಿಕೊಂಡಿದ್ದೇವೆ. ತನಿಖೆ ಪ್ರಗತಿಯಲ್ಲಿದೆ' ಎಂದು ಫಿರೋಝ್‌ಪುರ ಪೊಲೀಸ್‌ ವರಿಷ್ಠಾಧಿಕಾರಿ ರಣದೀಪ್‌ ಕುಮಾರ್‌ ತಿಳಿಸಿದ್ದಾರೆ.

ಶುಕ್ರವಾರ ಸಂಜೆ ಈ ಘಟನೆ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.

ಲಲಿತ್‌ ಅವರ ಸ್ನೇಹಿತ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಬೇಕಿತ್ತು. ಆತನನ್ನು ಕರೆದುಕೊಂಡು ಹೋಗಲು ತನ್ನ ಇಬ್ಬರು ಗೆಳೆಯರೊಂದಿಗೆ ಬಂದಿದ್ದ ಲಲಿತ್‌, ಜೈಲಿನ ಹೊರಗೆ ಕಾಯುತ್ತಿದ್ದ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಅಪರಿಚಿತರು ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಲ್ಲಿ ಉಲ್ಲೇಖಿಸಿದೆ.

ಲಲಿತ್‌ ಸ್ಥಿತಿ ಗಂಭೀರವಾಗಿದೆ. ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಬಂದ ಹಿರಿಯ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ದಾಳಿಕೋರರ ಪತ್ತೆಗೆ ತನಿಖೆ ಆರಂಭಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT