ಚಂಡೀಗಢ: ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಪಂಜಾಬ್ ಪೊಲೀಸರು ಭಾನುವಾರ ಭೇದಿಸಿದ್ದು, ಇಬ್ಬರನ್ನು ಬಂಧಿಸಿ 6 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಪಾಕಿಸ್ತಾನ ಮೂಲದ ಕಳ್ಳಸಾಗಣೆದಾರರು ಈ ಮಾದಕ ವಸ್ತುಗಳನ್ನು ಕಳುಹಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
.ಪಂಜಾಬ್: ಶಾಲಾಭಿವೃದ್ಧಿಯಲ್ಲಿ ಪಾಲಕರ ಪಾತ್ರ ಹೆಚ್ಚಳ ಪ್ರಸ್ತಾವಕ್ಕೆ ಸಂಪುಟ ಅಸ್ತು.
ಮಾಹಿತಿ ಮೇರೆಗ ತ್ವರಿತವಾಗಿ ಕಾರ್ಯನಿರ್ವಹಿಸಿದ ತರಣ್ ಪೊಲೀಸರು ಗಡಿಯಾಚೆಗಿನ ಮಾದಕವಸ್ತು ಕಳ್ಳಸಾಗಣೆ ಜಾಲವನ್ನು ಭೇದಿಸಿದ್ದಾರೆ. ಥಾಥಿ ಸೋಹಲ್ ನಿವಾಸಿಗಳಾದ ದೀಪ್ ಸಿಂಗ್ ಅಲಿಯಾಸ್ ಹರ್ದೀಪ್ ಸಿಂಗ್ ಮತ್ತು ಹರ್ಜೀತ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ಅವರಿಂದ 6 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ.

‘ಈ ಕೃತ್ಯದಲ್ಲಿ ಪಾಕಿಸ್ತಾನ ಮೂಲದ ಕಳ್ಳಸಾಗಣೆದಾರರ ಪಾತ್ರವು ಪ್ರಾಥಮಿಕ ತನಿಖೆಯಿಂದ ಬಹಿರಂಗಗೊಂಡಿದೆ’ ಎಂದು ಅವರು ಹೇಳಿದ್ದಾರೆ. ಇಬ್ಬರೂ ಆರೋಪಿಗಳಿಗೆ ಕ್ರಿಮಿನಲ್ ಹಿನ್ನೆಲೆ ಇದೆ ಎಂದು ಅವರು ತಿಳಿಸಿದ್ದಾರೆ.
.ಪಂಜಾಬ್ | ಡ್ರಗ್ಸ್ ದಂಧೆ: 510 ಕಡೆಗಳಲ್ಲಿ ದಾಳಿ, 43 ಮಂದಿಯ ಬಂಧನ.
NDPS ಕಾಯ್ದೆಯಡಿ ಎಫ್ಐಆರ್ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಡಿಜಿಪಿ ಹೇಳಿದ್ದಾರೆ.

ಪಂಜಾಬ್ ಪೊಲೀಸರು ಮಾದಕ ವಸ್ತು ದಂಧೆಗಳನ್ನು ನಿರ್ಮೂಲನೆ ಮಾಡಲು, ರಾಜ್ಯವನ್ನು ಮಾದಕ ವಸ್ತು ಮುಕ್ತಗೊಳಿಸಲು ಬದ್ಧರಾಗಿದ್ದಾರೆ ಎಂದು ಅವರು ಇದೇ ವೇಳೆ ಹೇಳಿದ್ದಾರೆ.
.ರಾಜ್ಯದಿಂದ ಗ್ಯಾಂಗ್ಸ್ಟರ್, ಕ್ರಿಮಿನಲ್ಗಳ ನಿರ್ಮೂಲನೆ: ಪಂಜಾಬ್ ಸಿಎಂ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.