ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರವಸೆಗಳನ್ನು ಸರ್ಕಾರಕ್ಕೆ ನೆನಪಿಸಲು ಪಂಜಾಬ್‌ ರೈತರಿಂದ ಟ್ರ್ಯಾಕ್ಟರ್ ರ್‍ಯಾಲಿ

Published 26 ಜನವರಿ 2024, 11:31 IST
Last Updated 26 ಜನವರಿ 2024, 11:31 IST
ಅಕ್ಷರ ಗಾತ್ರ

ಚಂಡೀಗಢ: ವಿವಾದಿತ ಕೃಷಿ ಕಾನೂನುಗಳನ್ನು ಹಿಂಪಡೆಯುವ ವೇಳೆ ಕೇಂದ್ರ ಸರ್ಕಾರ ನೀಡಿದ್ದ ಭವರಸೆಗಳನ್ನು ನೆನಪಿಸಲು ಸಂಯುಕ್ತ ಕಿಸಾನ್‌ ಮೋರ್ಚಾ ನೇತೃತ್ವದಲ್ಲಿ ಪಂಜಾಬ್‌ನಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ ನಡೆಯಿತು.

ಸಂಗೂರ್‌, ಜಲಂಧರ್‌, ಮೊಹಾಲಿ ಹಾಗೂ ಇನ್ನಿತರ ಪ್ರದೇಶಗಳಲ್ಲಿ ಟ್ರ್ಯಾಕ್ಟರ್‌ ರ್‍ಯಾಲಿ ನಡೆಯಿತು. ಇದೇ ವೇಳೆ ಕೃಷಿ ಕಾನೂನಿನ ವಿರುದ್ಧ ಹೋರಾಟದಲ್ಲಿ ಮಡಿದ ರೈತರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸಲು ನಾವು ಒತ್ತಾಯಿಸುತ್ತೇವೆ. ಕೃಷಿ ಕಾನೂನುಗಳನ್ನು ಹಿಂಪಡೆಯುವ ವೇಳೆ ಸರ್ಕಾರಿ ನೀಡಿದ್ದ ಭರವಸೆಗಳನ್ನು ನೆನಪಿಸಲು ಈ ರ್‍ಯಾಲಿ ಆಯೋಜಿಸಿದ್ದೇವೆ ಎಂದು ರೈತ ಮುಖಂಡ ಹರಿಂದರ್ ಸಿಂಗ್ ಲಖೋವಾಲ್ ಹೇಳಿದರು.

‘ಕೃಷಿ ಸಾಲ ಮನ್ನಾ ಹಾಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎನ್ನುವುದು ನಮ್ಮ ಆಗ್ರಹ. ರೈತರ ಆದಾಯ ದ್ವಿಗುಣ ಮಾಡಬೇಕು ಎಂದು ಸರ್ಕಾರ ಹೇಳಿತ್ತು. ಆದರೆ ಈಗ ಸಾಲ ದುಪ್ಪಟ್ಟಾಗಿದೆ. ನಮ್ಮ ಬೆಳೆಗಳಿಗೆ ಸರಿಯಾದ ಬೆಳೆ ಸಿಗುತ್ತಿಲ್ಲ’ ಎಂದು ಲಖೋವಾಲ್ ಹೇಳಿದರು.

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದೂ ರೈತರು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT