ಚಂಡೀಗಡ: ಪಂಜಾಬ್‌ನ ಕಾನೂನು ಸುವ್ಯವಸ್ಥೆ ಬಗ್ಗೆ ವಿರೋಧ ಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ, ಶಸ್ತ್ರಾಸ್ತ್ರಗಳ ಸಾರ್ವಜನಿಕ ಪ್ರದರ್ಶನ ಮತ್ತು ಬಂದೂಕು, ಹಿಂಸೆಯನ್ನು ಉತ್ತೇಜಿಸುವ ಹಾಡುಗಳನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದೆ.

‘ಮುಂದಿನ ಮೂರು ತಿಂಗಳ ಒಳಗಾಗಿ ಶಸ್ತ್ರಾಸ್ತ್ರ ಪರವಾನಗಿಯನ್ನು ಪರಿಶೀಲಿಸಲಾಗುತ್ತದೆ. ತಪ್ಪಾದ ವ್ಯಕ್ತಿಗಳಿಗೆ ಪರವಾನಗಿ ನೀಡಿರುವುದು ಪತ್ತೆಯಾದಲ್ಲಿ ಕೂಡಲೇ ಪರವಾನಗಿ ರದ್ದುಪಡಿಸಲಾಗುತ್ತದೆ’ ಎಂದು ಅಧಿಕೃತ ಆದೇಶದಲ್ಲಿ ತಿಳಿಸಿದೆ.

ಸಾರ್ವಜನಿಕ ಸ್ಥಳ, ಧಾರ್ಮಿಕ ಸ್ಥಳ, ವಿವಾಹ ಸಮಾರಂಭ ಮತ್ತಿತರ ಕಾರ್ಯಕ್ರಮಗಳಲ್ಲಿ ಶಸ್ತ್ರಾಸ್ತ್ರ ಕೊಂಡೊಯ್ಯಲು ಮತ್ತು ಪ್ರದರ್ಶಿಸಲು ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ.ಹಾಗೆಯೇ, ಯಾವುದೇ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚಿಸಲಾಗಿದೆ.

ಮುಂಬರುವ ದಿನಗಳಲ್ಲಿ ರಾಜ್ಯದಾದ್ಯಂತ ವಿವಿಧ ಪ್ರದೇಶಗಳಲ್ಲಿ ಅನಿರೀಕ್ಷಿತ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗುತ್ತದೆ ಎಂದೂ ತಿಳಿಸಿದೆ.

ರಾಜ್ಯದಲ್ಲಿ ಇತ್ತೀಚೆಗೆ ಶಿವಸೇನಾ ನಾಯಕ ಸುಧೀರ್ ಸೂರಿ ಮತ್ತು ಡೇರಾ ಸಚ್ಚಾ ಸೌದಾ ಅನುಯಾಯಿ ಪರ್ದೀಪ್ ಸಿಂಗ್ ಅವರನ್ನು ಹತ್ಯೆ ಮಾಡಲಾಗಿದೆ. ಈ ಬೆಳವಣಿಗೆ ನಂತರ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿ ವಿರೋಧ ಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.