ಅಮೃತಸರ: ಕೃಷಿ ಮಸೂದೆ ವಿರೋಧಿಸಿ ಪಂಜಾಬ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ‘ಕಿಸಾನ್ ಸಂಘರ್ಷ್ ಕಮಿಟಿ’ಯು ರೈಲು ತಡೆ ಚಳವಳಿ ಮುಂದುವರಿಸಿದೆ.

24ರಿಂದ 26ರ ವರೆಗೆ ರೈಲು ತಡೆ ಹಮ್ಮಿಕೊಂಡಿದ್ದರಿಂದ ಫಿರೋಜ್‌ಪುರ ವಿಭಾಗದಿಂದ ಸಂಚರಿಸಬೇಕಿದ್ದ ವಿಶೇಷ ರೈಲುಗಳು ರದ್ದಾಗಿದ್ದವು. ಇದೀಗ ಪ್ರತಿಭಟನೆಯನ್ನು ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ.

ಇದನ್ನೂ ಓದಿ:ಕೃಷಿ ಮಸೂದೆ ವಿರೋಧಿಸಿ ಪಂಜಾಬ್‌ನಲ್ಲಿ ‘ರೈಲು ತಡೆ’ ಚಳವಳಿ

ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಿದ್ದೇವೆ. ಸರ್ಕಾರವು ಮಸೂದೆಗಳನ್ನು ಹಿಂಪಡೆಯುವಂತೆ ಮಾಡಲಿದ್ದೇವೆ ಎಂದು ಸಮಿತಿಯ ಸದಸ್ಯರು ತಿಳಿಸಿದ್ದಾರೆ.

‘ದೇವಿದಾಸಪುರದಲ್ಲಿ ಕಳೆದ ಮೂರು ದಿನಗಳಿಂದ ಧರಣಿ ನಡೆಸುತ್ತಿದ್ದೇವೆ. ಮುಂಜಾನೆ ಪ್ರಾರ್ಥನೆ ಸಲ್ಲಿಸಿ ಧರಣಿ ಕುಳಿತುಕೊಳ್ಳುತ್ತೇವೆ. ಸೆಪ್ಟೆಂಬರ್ 29ರ ವರೆಗೂ ಇದು ಮುಂದುವರಿಯಲಿದೆ. ಪ್ರತಿಭಟನಾಕಾರರ ಸಂಖ್ಯೆ ಹೆಚ್ಚುತ್ತಿದೆ. ಮೋದಿ ಸರ್ಕಾರದ ಅಪಾಯಕರ ಮಸೂದೆಗಳ ವಿರುದ್ಧ ಪ್ರತಿಭಟನೆ ನಡೆಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬರುತ್ತಿದ್ದಾರೆ’ ಎಂದು ‘ಕಿಸಾನ್ ಸಂಘರ್ಷ್ ಕಮಿಟಿ’ಯ ಕಾರ್ಯದರ್ಶಿ ಗುರುಚರಣ್ ಸಿಂಗ್ ಛಬ್ಬಾ ಹೇಳಿದ್ದಾರೆ.

ಇದನ್ನೂ ಓದಿ:ರಾಜ್ಯಸಭೆಯಲ್ಲಿ ಕೋಲಾಹಲ: ವಿರೋಧದ ನಡುವೆಯೇ ಕೃಷಿ ಮಸೂದೆಗೆ ಅಸ್ತು

ವಿರೋಧ ಪಕ್ಷಗಳ ಸದಸ್ಯರ ಭಾರಿ ಗದ್ದಲ, ಪ್ರತಿಭಟನೆ ಮತ್ತು ವಿರೋಧದ ನಡುವೆಯೇ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಎರಡು ಮಸೂದೆಗಳಿಗೆ ಕಳೆದ ಭಾನುವಾರ ರಾಜ್ಯಸಭೆಯಲ್ಲಿ ಧ್ವನಿಮತದ ಅಂಗೀಕಾರ ಪಡೆಯಲಾಗಿತ್ತು.

ಹೊಸ ಮಸೂದೆಗಳಿಂದ ರೈತರಿಗೆ ಭಾರಿ ಅನುಕೂಲ: ಅಖಿಲ ಭಾರತ ರೈತ ಸಂಘಗಳ ಒಕ್ಕೂಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.