ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಾಯಿ, ಕೆನಡಾದಿಂದ ಮರಳಿದ್ದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪಂಜಾಬ್ ವ್ಯಕ್ತಿ

Published 23 ಜೂನ್ 2024, 13:59 IST
Last Updated 23 ಜೂನ್ 2024, 13:59 IST
ಅಕ್ಷರ ಗಾತ್ರ

ಚಂಡೀಗಢ: ವ್ಯಕ್ತಿಯೊಬ್ಬ ತನ್ನ ತಾಯಿ, ಮಗಳು ಹಾಗೂ ಸಾಕು ನಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ ವರದಿಯಾಗಿದೆ.

'ರಾಮ ರಾಜ್ಯ ಕಾಲೊನಿ'ಯಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಕುಲ್ಬೀರ್‌ ಮಾನ್‌ ಸಿಂಗ್‌ ಎಂದು ಗುರುತಿಸಲಾಗಿದೆ. ಆತ, ಪರವಾನಗಿ ಇದ್ದ ರಿವಾಲ್ವಾರ್‌ನಿಂದ ತನ್ನ ತಾಯಿ ಬಲವಂತ್ ಕೌರ್‌ (85), ಮಗಳು ನಿಮ್ರತ್ ಕೌರ್‌ (21) ಮತ್ತು ಸಾಕು ನಾಯಿಯನ್ನೂ ಕೊಂದಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

ಕುಲ್ಬೀರ್‌ ಬಹುದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದೂ ಅವರು ಹೇಳಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಕುಲ್ಬೀರ್‌ ಪುತ್ರಿ ಇತ್ತೀಚೆಗಷ್ಟೇ ಕೆನಡಾದಿಂದ ವಾಪಸ್‌ ಆಗಿದ್ದರು. ತನಿಖೆ ಪ್ರಗತಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT