ಅಮೃತಸರ/ ಚಂಡೀಗಢ: ಪಂಜಾಬ್ನ ಮೊಹಾಲಿ ಜಿಲ್ಲೆಯ ಆಮ್ಲಜನಕ ಸಿಲಿಂಡರ್ ಸ್ಥಾವರದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಮೊಹಾಲಿಯ ಕೈಗಾರಿಕಾ ಪ್ರದೇಶದಲ್ಲಿರುವ ಹೈಟೆಕ್ ಗ್ಯಾಸಸ್ ಪ್ರೈವೇಟ್ ಲಿಮಿಟೆಡ್ ಎಂಬ ಆಮ್ಲಜನಕ ಸಿಲಿಂಡರ್ ಸ್ಥಾವರದಲ್ಲಿ ಟ್ರಕ್ಗೆ ಸಿಲಿಂಡರ್ಗಳನ್ನು ಲೋಡ್ ಮಾಡುವಾಗ ಸ್ಫೋಟ ಸಂಭವಿಸಿದೆ’ ಎಂದು ಮೊಹಾಲಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಹರ್ಮನ್ ದೀಪ್ ಸಿಂಗ್ ಹೇಳಿದ್ದಾರೆ.

ಘಟನೆಯಲ್ಲಿ 25 ವರ್ಷದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಸ್ಫೋಟದ ತೀವ್ರತೆಗೆ ಮೃತರ ದೇಹದ ಭಾಗಗಳು ಛಿದ್ರಗೊಂಡಿದ್ದವು. ಆಮ್ಲಜನಕ ಸಿಲಿಂಡರ್ ಸ್ಥಾವರ ಮತ್ತು ಸಮೀಪದ ಕಟ್ಟಡಗಳಿಗೂ ಹಾನಿಯಾಗಿದೆ. ಘಟನಾ ಸ್ಥಳದಿಂದ ಸುಮಾರು ಒಂದು ಕಿಮೀ ದೂರದಲ್ಲಿರುವ ಕಂಬಳ ಗ್ರಾಮದಲ್ಲಿ ಸಿಲಿಂಡರ್ನ ಕೆಲವು ಭಾಗಗಳು ಬಿದ್ದಿವೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಘಟನೆಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈ ಕಷ್ಟದ ಸಮಯದಲ್ಲಿ ಪಂಜಾಬ್ ಸರ್ಕಾರ ಸಂತ್ರಸ್ತ ಕುಟುಂಬಸ್ಥರ ಬೆಂಬಲಕ್ಕೆ ನಿಂತಿದೆ. ಜತೆಗೆ, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹೈಟೆಕ್ ಗ್ಯಾಸಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಮೊಹಾಲಿ ಜಿಲ್ಲೆಯ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ದರ್ಜೆಯ ಆಮ್ಲಜನಕ ಸಿಲಿಂಡರ್ಗಳನ್ನು ಪೂರೈಸುತ್ತಿತ್ತು ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.