ಚಂಡೀಗಢ: ಪಂಜಾಬ್ನಲ್ಲಿ ಖಾಸಗಿ ಶಾಲೆಗಳ ವಾರ್ಷಿಕ ಶುಲ್ಕವು ಶೇ.5 ಕ್ಕೆ ಸೀಮಿತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಭಗವಂತ್ ಮಾನ್ ತಿಳಿಸಿದ್ದಾರೆ.

ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಭಗವಂತ್ ಮಾನ್, ಖಾಸಗಿ ಶಾಲೆಗಳಿಂದ ಪೋಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತಿದೆ. ಬಾಕಿ ಮೊತ್ತ ಪಾವತಿಸದಿದ್ದರೆ ಪ್ರಮಾಣಪತ್ರವನ್ನು ಹಿಡಿದಿಟ್ಟುಕೊಳ್ಳಲಾಗುವುದು ಎಂದು ಬೆದರಿಸಲಾಗುತ್ತಿದೆ. ಈ ಸಂಬಂಧ ಅನೇಕ ದೂರುಗಳು ಬಂದಿವೆ ಎಂದು ಹೇಳಿದ್ದಾರೆ.

ಪಂಜಾಬ್ ಸರ್ಕಾರವು ಖಾಸಗಿ ಶಾಲೆಗಳ ಶುಲ್ಕ ಹೆಚ್ಚಳವನ್ನು ವಾರ್ಷಿಕ ಶೇ 5ಕ್ಕೆ ಸೀಮಿತಗೊಳಿಸಲು ನಿರ್ಧರಿಸಿದೆ. ಅಂದರೆ ಒಂದು ವರ್ಷದಲ್ಲಿ ಶೇ 5ರಷ್ಟು ಮಾತ್ರ ಹೆಚ್ಚಿಸಬಹುದು. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಇದನ್ನು ಜಾರಿಗೆ ತರಲಾಗುವುದು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.