ಬಟಿಂಡಾ: ಪಂಜಾಬ್ನ ಬಟಿಂಡಾದಲ್ಲಿ ಸೇತುವೆ ಮೇಲಿಂದ ಬಸ್ ಉರುಳಿ ಬಿದ್ದು, ಎಂಟು ಪ್ರಯಾಣಿಕರು ಶುಕ್ರವಾರ ಮೃತಪಟ್ಟಿದ್ದಾರೆ.

45ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಖಾಸಗಿ ಬಸ್ ತಲವಂಡಿ ಸಾಬೊ ಮಾರ್ಗವಾಗಿ ಬಟಿಂಡಾ ಕಡೆಗೆ ಸಂಚರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಪೊಲೀಸರು ಮತ್ತು ಜಿಲ್ಲಾಡಳಿತದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್) ತಂಡವು ಸಹ ನೆರವು ನೀಡಲು ಸ್ಥಳಕ್ಕೆ ದೌಡಾಯಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಪ್ರತಿಕೂಲ ಹವಾಮಾನವು ಅವಘಡಕ್ಕೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
.Rajasthan Accident | ರಸ್ತೆ ಅಪಘಾತ: ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ಗಾಯ.ಜೈಪುರದಲ್ಲಿ ಭೀಕರ ಅಪಘಾತ; ಸಾವಿನ ಸಂಖ್ಯೆ 18ಕ್ಕೆ ಏರಿಕೆ: ಹಲವರ ಸ್ಥಿತಿ ಗಂಭೀರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.