ಚಂಡೀಗಢ: ಅಮೃತಸರದ ಸೇನಾ ಕಂಟೋನ್ಮೆಂಟ್ ಪ್ರದೇಶಗಳು ಮತ್ತು ವಾಯುನೆಲೆಗಳ ಸೂಕ್ಷ್ಮ ಮಾಹಿತಿ ಹಾಗೂ ಛಾಯಾಚಿತ್ರಗಳನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಪಂಜಾಬ್ ಪೊಲೀಸರು ಬೇಹುಗಾರಿಕೆ ಪ್ರತಿ ಕಾರ್ಯಾಚರಣೆಯಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.

ಅಮೃತಸರ ಗ್ರಾಮೀಣ ಪೊಲೀಸರು ಶನಿವಾರ ಪಾಲಕ್ ಶೇರ್ ಮಸಿಹ್ ಮತ್ತು ಸೂರಜ್ ಮಸಿಹ್ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಭಾನುವಾರ ತಿಳಿಸಿದ್ದಾರೆ.

ಪ್ರಸ್ತುತ ಅಮೃತಸರ ಕೇಂದ್ರ ಕಾರಾಗೃಹದಲ್ಲಿರುವ ಹರ್ಪ್ರೀತ್ ಸಿಂಗ್ ಅಲಿಯಾಸ್ ಪಿಟ್ಟು ಮೂಲಕ ಪಾಕಿಸ್ತಾನನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ಅವರ ಸಂಪರ್ಕವಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಡಿಜಿಪಿ ಹೇಳಿದ್ದಾರೆ.

ಅಧಿಕೃತ ರಹಸ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ತನಿಖೆ ಮುಂದುವರಿದಂತೆ ಮತ್ತಷ್ಟು ನಿರ್ಣಾಯಕ ಮಾಹಿತಿ ಹೊರಬರಬಹುದು ಎಂದು ನಿರೀಕ್ಷಿಸಲಾಗಿರುವುದಾಗಿ ಡಿಜಿಪಿ ಹೇಳಿದ್ದಾರೆ.
.ಸಿಂಗಪುರ ಸಾರ್ವತ್ರಿಕ ಚುನಾವಣೆ: ಆಡಳಿತಾರೂಢ ಪಿಎಪಿ ಪಕ್ಷಕ್ಕೆ ಭರ್ಜರಿ ಜಯ.ವಾಮಾಚಾರ ಆರೋಪ: ಪಾಕ್ ಮಹಿಳೆ ಸೀಮಾ ಹೈದರ್ ಮನೆಗೆ ನುಗ್ಗಲೆತ್ನಿಸಿದ ವ್ಯಕ್ತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.