ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪುರಿ ಜಗನ್ನಾಥ ದೇಗುಲದ ಜಾತ್ರೆ ವೇಳೆ ಪಟಾಕಿ ಸ್ಫೋಟ: ಮೃತರ ಸಂಖ್ಯೆ 11ಕ್ಕೆ ಏರಿಕೆ

Published 2 ಜೂನ್ 2024, 9:04 IST
Last Updated 2 ಜೂನ್ 2024, 9:04 IST
ಅಕ್ಷರ ಗಾತ್ರ

ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇಗುಲದ ಚಂದನ ಜಾತ್ರಾ ಮಹೋತ್ಸವ ವೇಳೆ ಸಂಭವಿಸಿದ್ದ ಪಟಾಕಿ ಸ್ಫೋಟದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮೇ 29ರ ರಾತ್ರಿ ಜಗನ್ನಾಥ ದೇಗುಲದಲ್ಲಿ ಚಂದನ ಜಾತ್ರಾ ಮಹೋತ್ಸವ ನಡೆದಿತ್ತು. ಭಕ್ತರ ಗುಂಪೊಂದು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿತ್ತು. ಈ ವೇಳೆ ಮರದ ತುಂಡೊಂದು ಪಟಾಕಿ ರಾಶಿಗೆ ಬಿದ್ದು ಸ್ಫೋಟ ಸಂಭವಿಸಿತ್ತು. ಅವಘಡದಲ್ಲಿ ಸುಮಾರು 30 ಮಂದಿ ಗಾಯಗೊಂಡಿದ್ದರು.

ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಪ್ರಸ್ತುತ 19 ಮಂದಿ ಗಾಯಾಳುಗಳು ಪುರಿ, ಭುವನೇಶ್ವರ ಮತ್ತು ಕಟಕ್‌ನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿಶೇಷ ಪರಿಹಾರ ಆಯುಕ್ತರ (ಎಸ್‌ಆರ್‌ಸಿ) ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಬಿಜೆಪಿಯ ಪುರಿ ಲೋಕಸಭಾ ಅಭ್ಯರ್ಥಿ ಸಂಬಿತ್ ಪಾತ್ರಾ ಶನಿವಾರ ಸಂಜೆ ಮೃತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದಾರೆ.

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ. ಪ್ರತಿ ಮೃತರ ಸಂಬಂಧಿಕರಿಗೆ ₹4 ಲಕ್ಷ ಪರಿಹಾರ ಘೋಷಿಸಿದ್ದಾರೆ.

'ಈ ಕುರಿತು ಸ್ವಯಂ ಪ್ರೇರಿತ ಕ್ರಿಮಿನಲ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ' ಎಂದು ಪುರಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT