ನವದೆಹಲಿ: ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರ ಮೂಲ ಉಪನಾಮ ಮೋದಿಯಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ರಾಹುಲ್ ಗಾಂಧಿ ತಿಳಿಸಿದ್ದಾರೆ.
ಪೂರ್ಣೇಶ್ ಮೋದಿ ಅವರ ಮೂಲ ಉಪನಾಮ ಮೋದಿಯಲ್ಲ. ಅವರು ಮೋದ್ ವಣಿಕ ಸಮಾಜಕ್ಕೂ ಸೇರಿದವರಲ್ಲ ಎಂದು ರಾಹುಲ್ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಿದ ಅಭಿಷೇಕ್ ಮನು ಸಿಂಘ್ವಿ ಹೇಳಿದರು.
'ನನ್ನ ಕಕ್ಷಿದಾರರ (ರಾಹುಲ್ ಗಾಂಧಿ) ಅಪರಾಧ ಹಿನ್ನೆಲೆಯವರಲ್ಲ. ಬಿಜೆಪಿ ಕಾರ್ಯಕರ್ತರು ದಾಖಲಿಸಿರುವ ಕೆಲ ಪ್ರಕರಣಗಳನ್ನು ಹೊರತುಪಡಿಸಿ ಬೇರೆ ಯಾವ ಪ್ರಕರಣಗಳಲ್ಲೂ ಅವರಿಗೆ ಶಿಕ್ಷೆಯಾಗಿಲ್ಲ’ ಎಂದೂ ಸಿಂಘ್ವಿ ಅವರು ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರಿದ್ದ ತ್ರಿಸದಸ್ಯ ಪೀಠಕ್ಕೆ ತಿಳಿಸಿದರು.
ಸುಪ್ರೀಂ ಕೋರ್ಟ್‌ನ ಆದೇಶವನ್ನು ಗೌರವಿಸುತ್ತೇವೆ. ಆದರೆ, ಕಾನೂನು ಹೋರಾಟವನ್ನು ಮುಂದುವರಿಸುತ್ತೇವೆ.
– ಪೂರ್ಣೇಶ್ ಮೋದಿ, (ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸಿದ್ದ ಗುಜರಾತ್ ಬಿಜೆಪಿ ಶಾಸಕ)
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.