ಪಿಟಿಐ

ಹೈದರಾಬಾದ್ (ಪಿಟಿಐ): ‘ಪುಷ್ಪ–2’ ಸಿನಿಮಾ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಅಲ್ಲು ಅರ್ಜುನ್ ಸೇರಿದಂತೆ 23 ಮಂದಿಯ ವಿರುದ್ಧ ಪೊಲೀಸರು ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಇಲ್ಲಿನ ನ್ಯಾಯಾಲಯವೊಂದಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಚಿತ್ರಮಂದಿರದ ಆಡಳಿತ ಮಂಡಳಿಯನ್ನು ಪ್ರಮುಖ ಆರೋಪಿಯನ್ನಾಗಿಸಲಾಗಿದೆ ಮತ್ತು ಅಲ್ಲು ಅರ್ಜುನ್ ಅವರನ್ನು 11ನೇ ಆರೋಪಿಯನ್ನಾಗಿಸಲಾಗಿದೆ.

ಕಳೆದ ವರ್ಷ ಡಿಸೆಂಬರ್ 4ರಂದು ಸಂಧ್ಯಾ ಚಿತ್ರಮಂದಿರದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 35 ವರ್ಷದ ಮಹಿಳೆ ಮೃತಪಟ್ಟಿದ್ದರು. ಘಟನೆಯ ಬಳಿಕ ಅಲ್ಲು ಅರ್ಜುನ್, ಅವರ ಭದ್ರತಾ ತಂಡ ಮತ್ತು ಸಂಧ್ಯಾ ಚಿತ್ರಮಂದಿರದ ಆಡಳಿತ ಮಂಡಳಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ನಂತರ ಡಿಸೆಂಬರ್ 13ರಂದು ಅಲ್ಲು ಅರ್ಜುನ್ ಅವರನ್ನು ಬಂಧಿಸಿ, ಡಿಸೆಂಬರ್ 14ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಬಳಿಕ ಅವರಿಗೆ ಜಾಮೀನು ಸಹ ದೊರೆತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.