ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಆಸ್ತಿ ವಿವರದ ಸತ್ಯಾಸತ್ಯತೆ ಪರಿಶೀಲಿಸುವ ವ್ಯವಸ್ಥೆ ರೂಪಿಸಿ: ಸಂಸದೀಯ ಸಮಿತಿ

Last Updated 31 ಮಾರ್ಚ್ 2023, 13:57 IST
ಅಕ್ಷರ ಗಾತ್ರ

ನವದೆಹಲಿ: ಐಎಎಸ್‌ ಅಧಿಕಾರಿಗಳು ಸಲ್ಲಿಸಿರುವ ಆಸ್ತಿ ವಿವರದ ಸತ್ಯಾಸತ್ಯತೆ ಪರಿಶೀಲಿಸುವ ವ್ಯವಸ್ಥೆ ರೂಪಿಸಿ ಎಂದು ಸಂಸದೀಯ ಸಮಿತಿಯು ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ (ಡಿಒಪಿಟಿ) ಸೂಚಿಸಿದೆ.

2011ರಿಂದ 2022ರ ವರೆಗಿನ ಅವಧಿಯಲ್ಲಿ 1,393 ಐಎಎಸ್‌ ಅಧಿಕಾರಿಗಳು ತಮ್ಮ ವಾರ್ಷಿಕ ಸ್ಥಿರ ಆಸ್ತಿಯ ಮಾಹಿತಿಯನ್ನು ಸಲ್ಲಿಸಿಲ್ಲ ಎಂದು ಇಲಾಖೆ ಸಂಬಂಧಿತ ಸಂಸದೀಯ ಸ್ಥಾಯಿ ಸಮಿತಿ ಈಚೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಲಾಗಿದೆ.

'ಭ್ರಷ್ಟಾಚಾರ ಪ್ರಕರಣಗಳು ವರದಿಯಾಗುತ್ತಿರುವುದನ್ನು ಮನಗಂಡು. ಅಧಿಕಾರಿಗಳು ಸ್ಥಿರ ಆಸ್ತಿ ವಿವರಗಳನ್ನು ಸಲ್ಲಿಕೆ ಮಾಡದಿರುವುದನ್ನು ಪರಿಶೀಲಿಸಲು ಸಮಿತಿಯು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ’ ಎಂದು ಈಚೆಗೆ ಸಂಸತ್‌ನಲ್ಲಿ ಮಂಡಿಸಿರುವ ವರದಿಯಲ್ಲಿ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT