ಅಮರಾವತಿ: ಆಂಧ್ರಪ್ರದೇಶ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ಪಕ್ಷದ ಹಿರಿಯ ನಾಯಕ ಪಿ.ವಿ.ಎನ್ ಮಾಧವ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.

ಚುನಾವಣೆ ಪ್ರಕ್ರಿಯೆ ಮೇಲ್ವಿಚಾರಣೆ ನಡೆಸಿದ್ದ ಬಿಜೆಪಿ ನಾಯಕ ಮತ್ತು ಸಂಸದ ಪಿ.ಸಿ. ಮೋಹನ್ ಅವರು ಮಾಧವ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದರು.

ರಾಜಮಂಡ್ರಿ ಸಂಸದೆ ದಗ್ಗುಬಾಟಿ ಪುರಂದೇಶ್ವರಿ ಅವರು ಕಳೆದ ಎರಡು ವರ್ಷಗಳ ಕಾಲ ರಾಜ್ಯಾಧ್ಯಕ್ಷರಾಗಿದ್ದು, ಅವರ ಸ್ಥಾನಕ್ಕೆ ಮಾಧವ ಅವರು ಆಯ್ಕೆಯಾಗಿದ್ದಾರೆ.

ಆಂಧ್ರಪ್ರದೇಶದಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾಧವ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದು, ಔಪಚಾರಿಕವಾಗಿ ಚುನಾವಣೆ ನಡೆಸಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಂದ ತೆರವಾಗಲಿರುವ ಸ್ಥಾನಕ್ಕೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಆರಂಭಿಸಲು ಪಕ್ಷ ನಿರ್ಧರಿಸಿದ್ದು, ಇದಕ್ಕೆ ಪೂರಕವಾಗಿ ವಿವಿಧ ರಾಜ್ಯಗಳ ಅಧ್ಯಕ್ಷರ ಆಯ್ಕೆಗೆ ಪಕ್ಷ ಮುಂದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.