ನವದೆಹಲಿ: ದೆಹಲಿಯಿಂದ ದೋಹಾಗೆ ಹೊರಟ್ಟಿದ್ದ ಕತಾರ್ ಪ್ರಯಾಣಿಕ ವಿಮಾನವು ಸೋಮವಾರ ಪಾಕಿಸ್ತಾನದ ಕರಾಚಿಯಲ್ಲಿ ಇಳಿದಿದೆ. ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಸೂಚನೆ ಸಿಗುತ್ತಿದ್ದಂತೆ ತುರ್ತಾಗಿ ಇಳಿಸಲಾಗಿದೆ ಎಂದು ಕತಾರ್ ವಿಮಾನಯಾನ ಸಂಸ್ಥೆಯು ತಿಳಿಸಿದೆ.

ವಿಮಾನವು ಕರಾಚಿಯಲ್ಲಿ ಸುರಕ್ಷಿತವಾಗಿ ಇಳಿದಿದ್ದು, ಪ್ರಯಾಣಿಕರನ್ನು ಕ್ರಮವಾಗಿ ಮೆಟ್ಟಿಲುಗಳ ಮೂಲಕ ಹೊರಗೆ ಇಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಬೆಳಗಿನ ಜಾವ 3:50ಕ್ಕೆ ದೆಹಲಿಯಿಂದ ಪ್ರಯಾಣ ಆರಂಭಿಸಿದ್ದ ವಿಮಾನವು ಬೆಳಿಗ್ಗೆ 5:30ಕ್ಕೆ ಕರಾಚಿಯಲ್ಲಿ ಇಳಿಯಿತು.

ಘಟನೆಯ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಹಾಗೂ ಪ್ರಯಾಣಿಕರನ್ನು ದೋಹಾಗೆ ತಲುಪಿಸಲು ಪ್ರತ್ಯೇಕ ವಿಮಾನದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರಿಗೆ ಎದುರಾದ ಅನನುಕೂಲಕ್ಕೆ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ.

'ದೆಹಲಿಯಿಂದ ದೋಹಾಗೆ ಪ್ರಯಾಣಿಸಬೇಕಿದ್ದ QR579 ವಿಮಾನವು ಮಾರ್ಚ್ 21ರಂದು ಕರಾಚಿಯ ಕಡೆಗೆ ತಿರುಗಿಸಲಾಯಿತು. ಸರಕು ಸಂಗ್ರಹ ವಿಭಾಗದಲ್ಲಿ ಹೊಗೆ ಕಾಣಿಸಿಕೊಂಡ ಸೂಚನೆ ಸಿಕ್ಕಿದ್ದರಿಂದ ತುರ್ತು ನಿರ್ಧಾರ ಕೈಗೊಳ್ಳಲಾಯಿತು' ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.