ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಮಾಣದ ಬಳಿಕ ವಿಖೆ ಬಿಜೆಪಿಗೆ?

Last Updated 28 ಮೇ 2019, 17:29 IST
ಅಕ್ಷರ ಗಾತ್ರ

ಮುಂಬೈ:ಎರಡನೇ ಅವಧಿಗೆ ಪ್ರಧಾನಿಯಾಗಿ ಮೋದಿ ಅವರು ಪ್ರಮಾಣವಚನ ಸ್ವೀಕರಿಸಿದ ಬಳಿಕ, ಮಹಾರಾಷ್ಟ್ರದ ಕಾಂಗ್ರೆಸ್‌ ಮುಖಂಡ ರಾಧಾಕೃಷ್ಣ ವಿಖೆ ಪಾಟೀಲ್‌ ಅವರು ಬೇಷರತ್ತಾಗಿ ಬಿಜೆಪಿ ಸೇರಲಿದ್ದಾರೆ ಎಂದು ಅಲ್ಲಿನ ಜಲಸಂಪನ್ಮೂಲ ಸಚಿವ ಗಿರೀಶ್‌ ಮಹಾಜನ್‌ ಹೇಳಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ವಿಖೆ ಪಾಟೀಲ್‌ ಅವರು ಲೋಕಸಭೆ ಚುನಾವಣೆ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದರು. ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಅವರು ಈವರೆಗೆ ಏನನ್ನೂ ಹೇಳಿಲ್ಲ.

ವಿಖೆ ಪಾಟೀಲ್‌ ಅವರು ಮಹಾಜನ್‌ ಅವರನ್ನು ಅವರ ನಿವಾಸದಲ್ಲಿ ಮಂಗಳವಾರ ಭೇಟಿಯಾದರು. ವಿಖೆ ಪಾಟೀಲ್‌ ಅವರ ಮಗ ಸುಜಯ್‌, ಅಹ್ಮದ್‌ನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದಾರೆ. ‘ನಾನು ಮಗನ ಪರ ಬಹಿರಂಗವಾಗಿಯೇ ಪ್ರಚಾರ ಮಾಡಿದ್ದೇನೆ. ನನ್ನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದೆ. ನನ್ನ ಮಗನಿಗೆ ಟಿಕೆಟ್‌ ನಿರಾಕರಿಸಿದ್ದು ಅನ್ಯಾಯ. ಇದು ಕಾಂಗ್ರೆಸ್‌ ಪಕ್ಷದ ನೀತಿಯನ್ನು ತೋರಿಸುತ್ತದೆ’ ಎಂದು ವಿಖೆ ಪಾಟೀಲ್‌ ಅವರು ಹರಿಹಾಯ್ದಿದ್ದಾರೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ, ಆದರೆ ಕಾಂಗ್ರೆಸ್‌ನ ಶಾಸಕರ ಜತೆಗೆ ತಾವು ಸಂಪರ್ಕದಲ್ಲಿ ಇಲ್ಲ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT