ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತದಲ್ಲಿ ಶನಿವಾರ ಪ್ಲಾಸ್ಟಿಕ್ ಚೀಲವೊಂದರಲ್ಲಿ ಇಟ್ಟಿದ್ದ ಸ್ಫೋಟಕ ಸಿಡಿದು ಚಿಂದಿ ಆಯುವ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ಬ್ಲೋಚ್‌ಮನ್ ಹಾಗೂ ಎಸ್.ಎನ್ ಬ್ಯಾನರ್ಜಿ ರಸ್ತೆಯ ಕ್ರಾಸಿಂಗ್ ಬಳಿ, ಪ್ಲ್ಯಾಸ್ಟಿಕ್ ಚೀಲವೊಂದರ ಬಳಿ ಚಿಂದಿ ಆಯುವ ವ್ಯಕ್ತಿಯು ನಿಂತಿದ್ದ ವೇಳೆ ಈ ಘಟನೆ ನಡೆದಿದೆ.
ಕೂಡಲೇ ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳವು ಚೀಲ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ತಪಾಸಣೆ ಆರಂಭಿಸಿತು. ಗಾಯಾಳುವನ್ನು 58 ವರ್ಷದ ಬಾಪಿ ದಾಸ್ ಎಂದು ಗುರುತಿಸಲಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.