ನವದೆಹಲಿ: ಕೇಂದ್ರ ಸರ್ಕಾರವು ಚೀನಾದೊಂದಿಗಿನ ಗಡಿ ಸಮಸ್ಯೆಯನ್ನು ನಿಭಾಯಿಸುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಮತ್ತೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಭಾರತವು 'ಭಾರಿ ಬೆಲೆ' ತೆರಬೇಕಾಗುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಸರ್ಕಾರವು 'ಚೇಂಬರ್‌ಲೈನ್' ನಂತೆ ವರ್ತಿಸುತ್ತಿದೆ ಮತ್ತು ಇದು ಚೀನಾವನ್ನು ಮತ್ತಷ್ಟು ಧೈರ್ಯಗೊಳಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಎರಡು ದಿನಗಳ ಭೇಟಿಗಾಗಿ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ಅವರು ಲಡಾಖ್‌ಗೆ ತೆರಳಿದ್ದ ಸಂದರ್ಭದಲ್ಲಿನ ಅವರ ಭಾಷಣವನ್ನು ಹಂಚಿಕೊಂಡಿರುವ ರಾಹುಲ್, ಚೀನಾ ನಮ್ಮ ಭೂಮಿಯನ್ನು ವಶಪಡಿಸಿಕೊಂಡಿದೆ ಮತ್ತು ಸರ್ಕಾರವು ಚೇಂಬರ್‌ಲೈನ್‌ನಂತೆ ವರ್ತಿಸುತ್ತಿದೆ. ಇದು ಚೀನಾವನ್ನು ಮತ್ತಷ್ಟು ಧೈರ್ಯಗೊಳಿಸುತ್ತದೆ. ಸರ್ಕಾರದ ಪುಕ್ಕಲುತನದ ಕ್ರಮಗಳಿಂದಾಗಿ ಭಾರತವು 'ಭಾರಿ ಬೆಲೆ' ತೆರಲಿದೆ ಎಂದು ಕಿಡಿಕಾರಿದ್ದಾರೆ.

ಲಡಾಖ್‌ನಲ್ಲಿ ಶುಕ್ರವಾರ ನಡೆದ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭಾಷಣವನ್ನು ಗಾಂಧಿ ಟ್ಯಾಗ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ಲಡಾಖ್‌ನಲ್ಲಿನ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಪರಿಹಾರಕ್ಕಾಗಿ ಚೀನಾದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದರು. ಆದರೆ ಅದು ಎಷ್ಟರ ಮಟ್ಟಿಗೆ ಸಾಧ್ಯವಾಗುತ್ತದೆ ಎಂಬುದನ್ನು ಅವರು ಖಾತರಿಪಡಿಸಿಲ್ಲ.

ಅಲ್ಲದೆ ವಿಶ್ವದ ಯಾವುದೇ ಶಕ್ತಿಯು ನಮ್ಮ ದೇಶದ ಭೂಮಿಯ ಒಂದು ಇಂಚನ್ನು ಕೂಡ ಮುಟ್ಟಲು ಸಾಧ್ಯವಿಲ್ಲ ಎಂದು ಸಿಂಗ್ ಬಲವಾದ ಸಂದೇಶವನ್ನು ರವಾನಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.