ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಹುಲ್ ಅನರ್ಹತೆ | ಬಿಜೆಪಿ ಸೆಲ್ಫ್‌ ಗೋಲು ಹೊಡೆದ ಹಾಗಾಗಿದೆ: ಶಶಿ ತರೂರ್

Last Updated 25 ಮಾರ್ಚ್ 2023, 10:06 IST
ಅಕ್ಷರ ಗಾತ್ರ

ತಿರುವನಂತಪುರ: ಲೋಕಸಭೆ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿರುವ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, ಬಿಜೆಪಿ ತಾನಾಗಿಯೇ ಸೆಲ್ಫ್ ಗೋಲು ಹೊಡೆದ ಹಾಗಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ಲೋಕಸಭೆ ಕಾರ್ಯಾಲಯದ ಕ್ರಮವನ್ನು ಖಂಡಿಸಿರುವ ತರೂರ್, ಅಂತಿಮವಾಗಿ ಇದರಿಂದ ರಾಹುಲ್ ಗಾಂಧಿ ಹಾಗೂ ವಿರೋಧ ಪಕ್ಷಗಳಿಗೆ ಪ್ರಯೋಜನವಾಗಲಿದೆ ಎಂದು ಹೇಳಿದ್ದಾರೆ.

ಇದು ಜಗತ್ತಿನಲ್ಲಿ ಭಾರತದ ಪ್ರಜಾಪ್ರಭುತ್ವವನ್ನು ಕೆಟ್ಟದಾಗಿ ಬಿಂಬಿಸಲಿದ್ದು, ಬಿಜೆಪಿ ಮೇಲೆ ಅಸಂಕಲ್ಪಿತ ಪರಿಣಾಮವನ್ನು ಉಂಟು ಮಾಡಲಿದೆ ಎಂದು ಹೇಳಿದ್ದಾರೆ.

ಪ್ರತಿಯೊಂದು ರಾಜಧಾನಿಯಲ್ಲೂ ರಾಹುಲ್ ಗಾಂಧಿ ಅವರಿಗೆ ಏನಾಯಿತು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಅಲ್ಲದೆ ವಿರೋಧ ಪಕ್ಷಗಳ ನಡುವೆ ಈ ಹಿಂದೆಂದೂ ಇರದ ರೀತಿಯಲ್ಲಿ ಒಗ್ಗಟ್ಟನ್ನು ಸೃಷ್ಟಿ ಮಾಡಿದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ವಿರೋಧಿಸುವ ಪ್ರಾದೇಶಿಕ ಪಕ್ಷಗಳು ರಾಹುಲ್ ಪರವಾಗಿ ನಿಂತಿದ್ದು, ಪ್ರಜಾಪ್ರಭುತ್ವದ ಮೇಲಿನ ಈ ದಾಳಿಯನ್ನು ಖಂಡಿಸಿವೆ ಎಂದು ಉಲ್ಲೇಖ ಮಾಡಿದರು.

ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಸೂರತ್ ನ್ಯಾಯಾಲಯದ ತೀರ್ಪನ್ನು ತರೂರ್ ಪ್ರಶ್ನೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT