ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯ್‌ಬರೇಲಿಯಿಂದ ರಾಹುಲ್‌ ಸ್ಪರ್ಧೆ ಇಂಡಿಯಾ ಮೈತ್ರಿಕೂಟಕ್ಕೆ ಸಹಾಯಕ: ಸಚಿನ್ ಪೈಲಟ್

Published 14 ಮೇ 2024, 14:08 IST
Last Updated 14 ಮೇ 2024, 14:08 IST
ಅಕ್ಷರ ಗಾತ್ರ

ರಾಯ್‌ಬರೇಲಿ: ಈ ಬಾರಿಯ ಲೋಕಸಭೆ ಚುನಾವಣೆಗೆ ರಾಯ್‌ಬರೇಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸ್ಪರ್ಧಿಸುತ್ತಿರುವುದು ಉತ್ತರ ಪ್ರದೇಶದಲ್ಲಿ ‘ಇಂಡಿಯಾ’ ಮೈತ್ರಿಕೂಟಕ್ಕೆ ಉತ್ತೇಜನ ನೀಡಲಿದೆ. ರಾಜ್ಯದಲ್ಲಿ ಬಿಜೆಪಿಗೆ ಭಾರಿ ಹಿನ್ನಡೆಯಾಗಲಿದೆ ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಸಚಿನ್‌ ಪೈಲಟ್‌ ಹೇಳಿದ್ದಾರೆ.

ಸುದ್ದಿಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ದಾಖಲೆಯ ಅಂತರದಿಂದ ಗೆಲುವು ಸಾಧಿಸಲಿದ್ದಾರೆ. ಅಮೇಠಿ ಮತ್ತು ರಾಯ್‌ಬರೇಲಿ ಎರಡೂ ಕ್ಷೇತ್ರಗಳು ವಿಭಿನ್ನವಾಗಿವೆ. ಹೆಚ್ಚಿನ ಮತದಾರರು ಕಾಂಗ್ರೆಸ್‌ ಪರವಾಗಿದ್ದಾರೆ. ಬಿಜೆಪಿಯಿಂದ ಯಾರೇ ಕಣಕ್ಕಿಳಿದರೂ, ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಭಾರಿ ಅಂತರದಿಂದ ಗೆಲ್ಲುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಯ್‌ಬರೇಲಿಯಿಂದ ರಾಹುಲ್‌ ಸ್ಪರ್ಧಿಸುತ್ತಿರುವುದು ಕಾಂಗ್ರೆಸ್‌ ಪಕ್ಷಕ್ಕೆ ಮಾತ್ರವಲ್ಲ, ‘ಇಂಡಿಯಾ’ ಮೈತ್ರಿಕೂಟಕ್ಕೂ ಸಹಾಯಕವಾಗಲಿದೆ. ಅಲ್ಲದೆ, ಉತ್ತರ ಪ್ರದೇಶದ ಜನರು ಬಯಸುತ್ತಿರುವ ಬದಲಾವಣೆ ರಾಜ್ಯದಲ್ಲಿ ಆಗಲಿದೆ ಎಂದು ಹೇಳಿದರು.

ರಾಯ್‌ಬರೇಲಿಯಲ್ಲಿ ರಾಹುಲ್‌ ಗಾಂಧಿ ಅವರ ಪ್ರತಿಸ್ಪರ್ಧಿಯಾಗಿ ಬಿಜೆಪಿಯಿಂದ ದಿನೇಶ್‌ ಪ್ರತಾಪ್‌ ಸಿಂಗ್‌ ಅವರು ಸ್ಪರ್ಧಿಸುತ್ತಿದ್ದಾರೆ. ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಅವರಿಗೆ ಕಾಂಗ್ರೆಸ್‌ನ ಕಿಶೋರಿ ಲಾಲ್‌ ಶರ್ಮಾ ಪೈಪೋಟಿ ನೀಡಲಿದ್ದಾರೆ.

5ನೇ ಹಂತದಲ್ಲಿ ಮೇ 20ರಂದು ರಾಯ್‌ಬರೇಲಿ ಕ್ಷೇತ್ರಕ್ಕೆ ಮತದಾನ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT