ಸಿವಾನ್: ಕೇಂದ್ರದ ನರೇಂದ್ರ ಮೋದಿ ಸರ್ಕಾರ ಚುನಾವಣಾ ಆಯೋಗದ ಸಹಾಯದಿಂದ ಮತಗಳನ್ನು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದರಿಂದ ಬಿಜೆಪಿ ನಾಯಕರು ಈಗ ಭಯಭೀತರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ.
.ವೈಯಕ್ತಿಕ ತೇಜೋವಧೆ ಮಾಡುವುದು RSS ಗುಣ; ಗಾಂಧಿಯನ್ನೂ ಬಿಡಲಿಲ್ಲ: ರಾಹುಲ್ ಗಾಂಧಿ.
ಬಿಹಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ 'ಮತದಾರ ಅಧಿಕಾರ ಯಾತ್ರೆ'ಯ ಭಾಗವಾಗಿ ಸಿವಾನ್ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

‘ನರೇಂದ್ರ ಮೋದಿ ಸರ್ಕಾರ ಚುನಾವಣಾ ಆಯೋಗದ ಸಹಾಯದಿಂದ ಮತಗಳನ್ನು ಕಳ್ಳತನ ಮಾಡಿ ಸಿಕ್ಕಿಬಿದ್ದಿದೆ. ಅದಕ್ಕಾಗಿಯೇ ಬಿಜೆಪಿ ನಾಯಕರು ಜಿಗಿಯಲು ಪ್ರಾರಂಭಿಸಿದ್ದಾರೆ’ ಎಂದು ಅವರು ಹೇಳಿದರು.
.ಮತ ಕಳ್ಳತನ | ಚುನಾವಣಾ ಆಯೋಗ–ಬಿಜೆಪಿ ಪಾಲುದಾರಿಕೆ: ರಾಹುಲ್ ಗಾಂಧಿ.
ಬಿಜೆಪಿ ನಡುಗುತ್ತಿದೆ ಮತ್ತು ಅದರ ನಾಯಕರು ಭಯಪೀಡಿತರಾಗಿದ್ದಾರೆ. ಭವಿಷ್ಯದಲ್ಲಿ ನಾವು ಎಲ್ಲವನ್ನೂ ಬಿಚ್ಚಿಡುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಬಿಜೆಪಿ ನಿಮ್ಮ ಮತಗಳನ್ನು ಕದಿಯುವ ಮೂಲಕ ಚುನಾವಣೆಗಳನ್ನು ಗೆಲ್ಲುತ್ತಿದೆ. ಈಗ, ನಾವು ಅವರಿಗೆ ಹಾಗೆ ಮಾಡಲು ಬಿಡುವುದಿಲ್ಲ. ಕಳೆದ ವರ್ಷದ ಲೋಕಸಭಾ ಚುನಾವಣೆಯ ನಂತರ ಅವರು ಮಹಾರಾಷ್ಟ್ರದ ಮತದಾರರ ಪಟ್ಟಿಯಲ್ಲಿ ಒಂದು ಕೋಟಿ ನಕಲಿ ಮತದಾರರನ್ನು ಸೇರಿಸಿದ್ದಾರೆ... ಇದು ಸಾಬೀತಾಗಿರುವ ಸತ್ಯ ಎಂದು ಗಾಂಧಿ ಹೇಳಿದ್ದಾರೆ.

ಮತದಾನ ದಲಿತರು, ಅಲ್ಪಸಂಖ್ಯಾತರು, ಮಹಿಳೆಯರ ಹಕ್ಕು ಆದರೆ ಮೋದಿ ಸರ್ಕಾರ ಚುನಾವಣೆ ಗೆಲ್ಲಲು ಮತಗಳನ್ನು ಕದಿಯುತ್ತದೆ ಎಂದು ಅವರು ಆರೋಪಿಸಿದ್ದಾರೆ.
.ಮದುವೆ ಮಾತುಕತೆ: ರಾಹುಲ್ ಗಾಂಧಿ ತಮಾಷೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.