ನವದೆಹಲಿ: ಬಿಹಾರದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ 'ಮತದಾರರ ಅಧಿಕಾರ ಯಾತ್ರೆ'ಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿಂದನಾತ್ಮಕ, ಅವಹೇಳನಕಾರಿ ಪದ ಪ್ರಯೋಗ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ದಿವಂಗತ ತಾಯಿಯ ವಿರುದ್ಧವೂ ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಬಿಜೆಪಿ ಪಕ್ಷದ ಅಧಿಕೃತ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ರಾಹುಲ್ ಗಾಂಧಿ ಹಾಗೂ ತೇಜಸ್ವಿ ಯಾದವ್ ಅವರ ಅರಿವಿನೊಂದಿಗೆ ಇವೆಲ್ಲವೂ ನಡೆಯುತ್ತಿದೆ. ಇಷ್ಟು ಕೀಳುಮಟ್ಟದ ರಾಜಕೀಯ ಹಿಂದೆಂದೂ ಕಂಡಿರಲಿಲ್ಲ. ಈ ಯಾತ್ರೆಯಲ್ಲಿ ದ್ವೇಷ ರಾಜಕೀಯ ಎಲ್ಲ ಮಿತಿಗಳನ್ನು ಮೀರಿದೆ ಎಂದು ಹೇಳಿದೆ.

ಬಿಹಾರವನ್ನು ಅವಮಾನಿಸಿದ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹಾಗೂ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ಅವರನ್ನು ಆಹ್ವಾನಿಸುವ ಮೂಲಕ ಬಿಹಾರದ ಜನತೆಗೆ ಅವಮಾನ ಎಸಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ಇವೆಲ್ಲವನ್ನು ಬಿಹಾರದ ಜನತೆ ಎಂದಿಗೂ ಮರೆಯುವುದಿಲ್ಲ. ಸಾವಿರ ಬಾರಿ ಕ್ಷಮೆಯಾಚಿಸಿದರೂ ಇದು ಅತ್ಯಂತ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದೆ.
.ವೈಯಕ್ತಿಕ ತೇಜೋವಧೆ ಮಾಡುವುದು RSS ಗುಣ; ಗಾಂಧಿಯನ್ನೂ ಬಿಡಲಿಲ್ಲ: ರಾಹುಲ್ ಗಾಂಧಿ.ಮತದಾರರ ಅಧಿಕಾರ ಯಾತ್ರೆ: ರಾಹುಲ್ ಜೊತೆ ಸೇರಿಕೊಂಡ ಪ್ರಿಯಾಂಕಾ ಗಾಂಧಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.