ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಎದುರಿಸುವ ಸಾಮರ್ಥ್ಯ ರಾಹುಲ್ ಗಾಂಧಿಗೆ ಇದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹೇಳಿದ್ದಾರೆ.

ಪಿಟಿಐ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು,‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಎದುರಿಸುವ ಸಾಮರ್ಥ್ಯ ರಾಹುಲ್ ಗಾಂಧಿ ಅವರಿಗೆ ಇದೆ. ಆದರೆ ಪ್ರಧಾನಿ ಅಭ್ಯರ್ಥಿ ಯಾರಾಗಬೇಕು ಎನ್ನುವುದನ್ನು ವಿರೋಧ ಪಕ್ಷಗಳು ತೀರ್ಮಾನ ಮಾಡಲಿವೆ‘ ಎಂದು ಅವರು ಹೇಳಿದ್ದಾರೆ.

‘ಭಾರತ್ ಜೋಡೊ ಯಾತ್ರೆಯ ಮೂಲಕ ರಾಹುಲ್ ಗಾಂಧಿ ಅವರು ಎತ್ತಿ ಹಿಡಿಯುತ್ತಿರುವ ವಿಚಾರಗಳು ಸಾಮಾನ್ಯ ಜನರಿಗೆ ಸಂಬಂಧಿಸಿವೆ. ಅವರ ನೀಡುತ್ತಿರುವ ಸಂದೇಶ ದೇಶದ ಪ್ರತಿ ಮನೆಯನ್ನೂ ತಲುಪುತ್ತಿದೆ‘ ಎಂದು ಹೇಳಿದ್ದಾರೆ.

ಸದ್ಯ ಚುನಾವಣೆ ಘೋಷಣೆಯಾಗಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಎರಡೂ ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆ ಇದೆ. ಕಾಂಗ್ರೆಸ್ ಇಲ್ಲಿ ವೇಗವಾಗಿ ಬೆಳೆಯುತ್ತಿದೆ. ಹಿಮಾಚಲ ಪ್ರದೇಶದಲ್ಲಿ ಭಾರಿ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಲಿದೆ‘ ಎಂದು ಗೆಹಲೋತ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.