ನವದೆಹಲಿ: ಕೇಂದ್ರೀಯ ತನಿಖಾ ದಳದ(ಸಿಬಿಐ) ನಿರ್ದೇಶಕರ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸಮ್ಮತಿ ಪತ್ರವನ್ನು ಸಲ್ಲಿಸಿದ್ದಾರೆ.

ಪತ್ರವನ್ನು ಎಕ್ಸ್ನಲ್ಲಿ ಹಂಚಿಕೊಂಡಿರುವ ಅವರು, ‘ಈ ಪ್ರಕ್ರಿಯೆಯು ಪಕ್ಷಪಾತದಿಂದ ಕೂಡಿದ್ದು, ಲೋಕಸಭಾ ವಿರೋಧ ಪಕ್ಷದ ನಾಯಕ ರಬ್ಬರ್ ಸ್ಟ್ಯಾಂಪ್ ಅಲ್ಲ’ ಎಂದು ಹೇಳಿದ್ದಾರೆ.

ಅಂತಿಮ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ತಮಗೆ ನಿರಾಕರಿಸಲಾಗಿದೆ ಎಂದು ದೂರಿರುವ ಅವರು, ‘ಇದು ಆಯ್ಕೆ ಪ್ರಕ್ರಿಯೆಯ ಅಣಕ’ ಎಂದು ಕರೆದಿದ್ದಾರೆ.

ಪದೇ ಪದೇ ಲಿಖಿತ ವಿನಂತಿಗಳನ್ನು ಮಾಡಿದರೂ ಅರ್ಹ ಅಭ್ಯರ್ಥಿಗಳ ಸಂಪೂರ್ಣ ವರದಿಯನ್ನು ನನಗೆ ಒದಗಿಸಿಲ್ಲ. ಸಭೆಯ ಸಮಯದಲ್ಲಿಯೇ ಮೊದಲ ಬಾರಿಗೆ 69 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸುವಂತೆ ನಿರೀಕ್ಷಿಸಲಾಗಿತ್ತು ಎಂದು ಹೇಳಿದ್ದಾರೆ.

ಪ್ರತಿ ಅಭ್ಯರ್ಥಿಯ ಇತಿಹಾಸ ಮತ್ತು ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ಈ ದಾಖಲೆಗಳ ವಿವರವಾದ ಪರಿಶೀಲನೆ ಅತ್ಯಗತ್ಯ. ಸರ್ಕಾರದ ಆದ್ಯತೆಯ ಅಭ್ಯರ್ಥಿಯೇ ಆಯ್ಕೆಯಾಗುವಂತೆ ಈ ಪ್ರಕ್ರಿಯೆಯನ್ನು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಕಳೆದ ವರ್ಷ ಮೇ 5ರಂದು ನಡೆದ ಹಿಂದಿನ ಸಭೆಯಲ್ಲೂ ನಾನು ನನ್ನ ಅಸಮ್ಮತಿಯನ್ನು ದಾಖಲಿಸಿದ್ದೆ. ನ್ಯಾಯಯುತ ಮತ್ತು ಪಾರದರ್ಶಕ ಪ್ರಕ್ರಿಯೆ ನಡೆಸುವಂತೆ ಕೋರಿ ಅದೇ ವರ್ಷ ಅಕ್ಟೋಬರ್ 21ರಂದು ಪ್ರಧಾನಿ ಅವರಿಗೆ ಪತ್ರ ಬರೆದಿದ್ದೆ. ಅದಕ್ಕೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಮೇ 24ರಂದು ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ ಅವರ ಅಧಿಕಾರವಧಿ ಮುಕ್ತಾಯಗೊಳ್ಳಲಿದ್ದು, ಹೊಸ ನಿರ್ದೇಶಕರನ್ನು ಆಯ್ಕೆ ಮಾಡುವ ಬಗ್ಗೆ ಚರ್ಚಿಸಲು ಪ್ರಧಾನಮಂತ್ರಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಪ್ರಧಾನಿ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ರಾಹುಲ್ ಗಾಂಧಿ ಈ ಸಭೆಯಲ್ಲಿ ಭಾಗವಹಿಸಿದ್ದರು.

ಪರಾಗ್ ಜೈನ್, ಶತ್ರುಜಿತ್ ಕಪೂರ್, ಯೋಗೇಶ್ ಗುಪ್ತಾ, ಜಿ.ಪಿ. ಸಿಂಗ್ ಮತ್ತು ಪ್ರವೀರ್ ರಂಜನ್ ಅವರ ಹೆಸರುಗಳು ಮುಂಚೂಣಿಯಲ್ಲಿದೆ ಎಂದು ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.