ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ದನಿಯೆತ್ತಲು ಕಾಂಗ್ರೆಸ್ ತೀರ್ಮಾನ

Last Updated 4 ಆಗಸ್ಟ್ 2018, 12:02 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು ಹೇಗೆ ಎಂಬುವುದರ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ.ಶನಿವಾರ ಕಾಂಗ್ರೆಸ್ ಅದ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಸಭೆ ನಡೆದಿದೆ.

ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ ಪರಿಷ್ಕೃತ ಕರಡು ಪಟ್ಟಿಯಲ್ಲಿ (ಎನ್‌ಆರ್‌ಸಿ), ರಫೆಲ್ ಫೈಟರ್ ವಿಮಾನ ಒಪ್ಪಂದ, ನಿರುದ್ಯೋಗ ಮೊದಲಾದ ವಿಷಯಗಳ ಬಗ್ಗೆ ಇಲ್ಲಿ ಚರ್ಚಿಸಲಾಗಿದೆ. ರಾಹುಲ್ ಗಾಂಧಿ ಅಧ್ಯಕ್ಷರಾದ ನಂತರ ನಡೆದ ಎರಡನೇ ಸಭೆ ಆಗಿದೆ ಇದು. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಈ ಸಭೆಗೆ ಗೈರು ಹಾಜರಾಗಿದ್ದರು.

ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ ಪರಿಷ್ಕೃತ ಕರಡು ಪಟ್ಟಿ ಬಗ್ಗೆ ಚರ್ಚೆ ನಡೆದಾಗ ಕಾಂಗ್ರೆಸ್ ಪಕ್ಷದ ನಾಯಕರಲ್ಲಿಯೇ ಭಿನ್ನಮತ ಕಂಡುಬಂದಿದೆ. ಕೆಲವು ನಾಯಕರು ವಿಷಯದಲ್ಲಿ ಪಕ್ಷ ಸ್ಪಷ್ಟ ನಿಲುವು ತಾಳಬೇಕು ಎಂದು ಒತ್ತಾಯಿಸಿದರೆ ಇನ್ನು ಕೆಲವರು ಅದರ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ಏತನ್ಮಧ್ಯೆ, ರೈತರ ಸಮಸ್ಯೆ, ನಿರುದ್ಯೋಗ, ಆರ್ಥಿಕ ಸಮಸ್ಯೆ, ದಲಿತರ ಮೇಲಿನ ದೌರ್ಜನ್ಯ, ಮಹಿಳೆಯರ ಮೇಲಿನ ದೌರ್ಜನ್ಯ, ವಿದೇಶಿ ನೀತಿ, ಆಂತರಿಕ ಭದ್ರತೆಯಲ್ಲಿನ ಲೋಪ ಮತ್ತು ಸಾಮರಸ್ಯ ಕಾಪಾಡಲು ವಿಫಲವಾದ ಬಿಜೆಪಿ ಸರ್ಕಾರದ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಸಲುಕಾಂಗ್ರೆಸ್ ತೀರ್ಮಾನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT