ನವದೆಹಲಿ: 'ಚೀನಾ ಗುರು' ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಭಾರತೀಯ ಸಶಸ್ತ್ರ ಪಡೆಗಳನ್ನು ದ್ವೇಷಿಸುತ್ತದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ.

2022ರ ಭಾರತ್ ಜೋಡೊ ಯಾತ್ರೆ ವೇಳೆ ಭಾರತೀಯ ಸೇನೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ.

‘ನೀವು ನಿಜವಾದ ಭಾರತೀಯರಾಗಿದ್ದರೆ, ಅಂತಹ ಹೇಳಿಕೆಗಳನ್ನು ನೀಡುತ್ತಿರಲಿಲ್ಲ’ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ಇದರ ಬೆನ್ನಲ್ಲೇ ಬಿಜೆಪಿ ಪಕ್ಷವು ರಾಹುಲ್ ವಿರುದ್ಧ ಕಿಡಿಕಾರಿದೆ.
.ಕಾಪು ಲೈಟ್ಹೌಸ್ ಬಳಿ ಸಮುದ್ರದಲ್ಲಿ ಮಗುಚಿದ ದೋಣಿ: ಏಳು ಜನ ಮೀನುಗಾರರ ರಕ್ಷಣೆ.ನಾಡಹಬ್ಬ ದಸರೆಗೆ ಗಜಪಯಣ ಶುರು: ನಾಗರಹೊಳೆಯಿಂದ ಮೈಸೂರಿನತ್ತ ಹೊರಟ ಗಜಪಡೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಬಿಜೆಪಿ ಮುಖಂಡ ಅಮಿತ್ ಮಾಳವೀಯ, 'ಭಾರತದ ರಾಷ್ಟ್ರೀಯ ಭದ್ರತೆ ಮತ್ತು ಸಮಗ್ರತೆಯ ಬಗ್ಗೆ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಮತ್ತೊಮ್ಮೆ 'ಚೀನಾ ಗುರು' ರಾಹುಲ್ ಗಾಂಧಿಯವರನ್ನು ತರಾಟೆಗೆ ತೆಗೆದುಕೊಂಡಿದೆ' ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ವಿದೇಶಿ ಶಕ್ತಿಗಳ ರಿಮೋಟ್ ಕಂಟ್ರೋಲ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಪ್ರದೀಪ್ ಭಂಡಾರಿ ಹೇಳಿದ್ದಾರೆ.

ಸರ್ಜಿಕಲ್ ಸ್ಟ್ರೈಕ್ ಮತ್ತು ಆಪರೇಷನ್ ಸಿಂಧೂರ ಬಗ್ಗೆ ಗಾಂಧಿಯವರ ಹೇಳಿಕೆಗಳನ್ನು ಉಲ್ಲೇಖಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲ, ರಾಹುಲ್ ಗಾಂಧಿ ಮತ್ತು ಅವರ ಪಕ್ಷವು ಭಾರತೀಯ ಸಶಸ್ತ್ರ ಪಡೆಗಳನ್ನು ದ್ವೇಷಿಸುತ್ತದೆ ಎಂದು ಆರೋಪಿಸಿದ್ದಾರೆ.
.‘ಎಸ್ಐಆರ್’ ಬಹಳ ದೊಡ್ಡ ವಿಷಯ, ಚರ್ಚೆಗೆ ಸರ್ಕಾರ ಒಪ್ಪಿಕೊಳ್ಳಲೇಬೇಕು: ಪ್ರಿಯಾಂಕಾ.ಬುಡಕಟ್ಟು ಜನಾಂಗದವರ ಹೋರಾಟದ ಹಾದಿಗೆ ಸ್ಫೂರ್ತಿ ಶಿಬು ಸೊರೇನ್: ಅಮಿತ್ ಶಾ.ಸರಳ ಪದ ಬಳಸಿ ಹೊಗಳಿದ್ದ MP ತರೂರ್ಗೆ ಕ್ಲಿಷ್ಟ ಪದಗಳಿಂದ ಕಾಲೆಳೆದ ನಟ ಶಾರುಕ್.ನೀವು ನಿಜವಾದ ಭಾರತೀಯರಾಗಿದ್ದರೆ, ಅಂತಹ ಹೇಳಿಕೆ ನೀಡುತ್ತಿರಲಿಲ್ಲ: ರಾಹುಲ್ಗೆ SC.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.