ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜನ ಮೊದಲು ಎನ್ನುವ ಸಿದ್ದಾಂತಕ್ಕೆ ದಕ್ಕಿದ ಜಯ: ಸ್ಟಾರ್ಮರ್‌ಗೆ ರಾಹುಲ್ ಅಭಿನಂದನೆ

Published 7 ಜುಲೈ 2024, 2:42 IST
Last Updated 7 ಜುಲೈ 2024, 2:42 IST
ಅಕ್ಷರ ಗಾತ್ರ

ನವದೆಹಲಿ: ಬ್ರಿಟನ್ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಕೀರ್ ಸ್ಟಾರ್ಮರ್ ಅವರಿಗೆ ಅಭಿನಂದನೆ ಸಲ್ಲಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ‘ಜನರೇ ಮೊದಲು ಎಂದು ಪರಿಗಣಿಸುವ ರಾಜಕೀಯದ ಶಕ್ತಿಗೆ ಅವರ(ಸ್ಟಾರ್ಮರ್‌) ಗೆಲುವು ಸಾಕ್ಷಿ‌ಯಾಗಿದೆ’ ಎಂದು ಬಣ್ಣಿಸಿದ್ದಾರೆ.

‘ಸ್ಟಾರ್ಮರ್ ಅವರ ಚುನಾವಣಾ ಪ್ರಚಾರವು ಆರ್ಥಿಕ ಸಮಾನತೆಗೆ ಒತ್ತು ನೀಡುವುದು, ಎಲ್ಲರಿಗೂ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ಮತ್ತು ಸಮುದಾಯಗಳ ಸಬಲೀಕರಣದ ಮೇಲೆ ಕೇಂದ್ರೀಕರಿಸಿತ್ತು. ಇದು ಬ್ರಿಟನ್ ಜನರ ಮೇಲೆ ಉತ್ತಮ ಪರಿಣಾಮ ಬೀರಿದ್ದು, ತಮ್ಮ ಭವಿಷ್ಯದ ಬಗ್ಗೆ ಭರವಸೆ ಮೂಡಿಸಿದ್ದವು’ ಎಂದು ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಹೇಳಿಕೆಯನ್ನು ಕಾಂಗ್ರೆಸ್ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

‘ಇಂತಹ ಆದರ್ಶಗಳಿಗೆ ಬದ್ಧರಾಗಿರುವ ನಿಮಗೆ ಮತ್ತು ಬ್ರಿಟನ್ ಜನರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಜನರೇ ಮೊದಲು ಎಂದು ಪರಿಗಣಿಸುವ ರಾಜಕೀಯದ ಶಕ್ತಿಗೆ ಈ ಗೆಲುವು ಸಾಕ್ಷಿ‌ಯಾಗಿದೆ. ಭಾರತ ಮತ್ತು ಬ್ರಿಟನ್‌ ನಡುವಿನ ದ್ವಿಪಕ್ಷೀಯ ಸಂಬಂಧ ಬಲವರ್ಧನೆಗೆ ನಾನು ಎದುರು ನೋಡುತ್ತಿದ್ದೇನೆ’ ಎಂದರು.

ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ 650 ಕ್ಷೇತ್ರಗಳ ಪೈಕಿ 420ಕ್ಕೂ ಅಧಿಕ ಸ್ಥಾನಗಳನ್ನು ಲೇಬರ್ ಪಕ್ಷ ಗೆದ್ದುಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT